
ಚಿಕ್ಕಮಗಳೂರು,ಮೇ.04: ಅಂಚೆ ಮತಗಳ ಎಣಿಕೆ ವಿಚಾರವು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಕಿತ್ತಾಟಕ್ಕೆ ಕಾರಣವಾಗಿದ್ದು, ಕಳೆದ ಎರಡು ದಿನಗಳಿಂದ ಇದೇ ವಿಚಾರವಾಗಿ ಭಾರೀ ಹೈಡ್ರಾಮ ನಡೆದು ಅಂತಿಮವಾಗಿ ಚುನಾವಣಾಧಿಕಾರಿಗಳು ಬಿಜೆಪಿಯ ಜೀವರಾಜ್ ಗೆಲುವು ಘೋಷಿಸಿ ಪ್ರಮಾಣಪತ್ರ ವಿತರಿಸಿದ್ದರು.ಆದರೆ ಇಷ್ಟೆಲ್ಲಾ ರಾದ್ದಾಂತ ನಡೆದ ನಡುವೆಯೇ ಇದೀಗ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದ್ದು,ಅಂಚೆ ಮತ ಎಣಿಕೆ ಟೇಬಲ್ನ ಏಜೆಂಟ್ ಆಗಿದ್ದ ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮುರೋಳ್ಳಿ ಅವರು ನೀಡಿದ ದೂರಿನ ಮೇರೆಗೆ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್, ಅಂದಿನ ಚುನಾವಣಾಧಿಕಾರಿ ವೇದಮೂರ್ತಿ ಮತ್ತು ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ಅವರ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಈ ಪ್ರಕರಣದಲ್ಲಿ ಅಂದಿನ ಚುನಾವಣಾಧಿಕಾರಿ ವೇದಮೂರ್ತಿ ಅವರನ್ನು A1 ಆರೋಪಿಯನ್ನಾಗಿಸಿದರೆ, ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರನ್ನು A2 ಮತ್ತು ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ಅವರನ್ನು A3 ಹೆಸರಿಸಲಾಗಿದೆ. ಶೃಂಗೇರಿ ಕ್ಷೇತ್ರದ ಚುನಾವಣಾ ಫಲಿತಾಂಶದ ಬೆನ್ನಲ್ಲೇ ದಾಖಲಾಗಿರುವ ಈ ಕ್ರಿಮಿನಲ್ ಪ್ರಕರಣ ಇದೀಗ ಜಿಲ್ಲೆಯ ರಾಜಕೀಯ ವಲಯದಲ್ಲಿ ಭಾರೀ ಗುದ್ದಾಟಕ್ಕೆ ಕಾರಣವಾಗಿದೆ.
ಸುಧೀರ್ ಕುಮಾರ್ ಮುರೋಳ್ಳಿ ಅವರು ನೀಡಿದ ದೂರಿನಲ್ಲಿ ಮತಪತ್ರಗಳನ್ನು ಇರಿಸಲಾಗಿದ್ದ ಸ್ಟ್ರಾಂಗ್ ರೂಂ ಸೀಲ್ ಆಗಿರಲಿಲ್ಲ ಮತ್ತು ಟ್ರಂಕ್ಗಳ ಲಾಕ್ ಕಟ್ ಆಗಿತ್ತು ಎಂದು ಗಂಭೀರ ಆರೋಪ ಮಾಡಿದ್ದಾರೆ. ಮತ ಪತ್ರಗಳನ್ನು ಟ್ಯಾಂಪರಿAಗ್ ಮಾಡಲಾಗಿದೆ ಎಂಬ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ವಂಚನೆ, ಕ್ರಿಮಿನಲ್ ಪಿತೂರಿ ಹಾಗೂ ಫೋರ್ಜರಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.



.
.
.
.
.
.
.
.
.
.
.
.
.
.
.
.
.
.
.
.
