
ಹೆಬ್ರಿ,ಮೇ.14: ಮುನಿಯಾಲು ರಿಕ್ಷಾ ಚಾಲಕ ಸಂಘದ ಕಾರ್ಯದರ್ಶಿ ಮುನಿಯಾಲು ನಿವಾಸಿ ಸಂತೋಷ್ ನಾಯ್ಕ್(42) ಬುಧವಾರ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ವರಂಗ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾಗಿ ವಿವಿಧ ಸಂಘಸಂಸ್ಥೆಗಳಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಂಡಿದ್ದ,ಅವರು ಇತ್ತೀಚೆಗೆ ಹೃದಯಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು.
ಬುಧವಾರ ಮಧ್ಯಾಹ್ನ ಏಕಾಎಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಪತ್ನಿ ಹಾಗೂ ಇಬ್ಬರು ಮಕ್ಕಳು ಸಹಿತ ಬಂಧುವರ್ಗವನ್ನು ಅಗಲಿದ್ದಾರೆ.



.
.
.
.
.
.
.
.
.
.
.
.
.
.
.
.
.
.
.
.
