
ನವದೆಹಲಿ,ಮೇ.15: ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ NEET ಇನ್ನು ಮುಂದೆ ಸಂಪೂರ್ಣವಾಗಿ ಬದಲಾಗಲಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ನೀಟ್ ಪರೀಕ್ಷೆಯನ್ನು ಆನ್‌ಲೈನ್ ಮೂಲಕ ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಹತ್ವದ ಘೋಷಣೆ ಮಾಡಿದ್ದಾರೆ.
ಇತ್ತೀಚೆಗೆ ನಡೆದ NEET ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದ್ದು, ಈ ನಿಟ್ಟಿನಲ್ಲಿ ಇನ್ನು ಮುಂದೆ ಅಭ್ಯರ್ಥಿಗಳು ಪೆನ್ ಮತ್ತು ಪೇಪರ್ ಬಳಸಿ ಒಎಂಆರ್ ಶೀಟ್ ತುಂಬುವ ಅಗತ್ಯವಿರುವುದಿಲ್ಲ. ಆನ್‌ಲೈನ್ ಪರೀಕ್ಷೆಯಿಂದಾಗಿ ಅಕ್ರಮಗಳಿಗೆ ಕಡಿವಾಣ ಬೀಳಲಿದ್ದು, ಪರೀಕ್ಷಾ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಬರಲಿದೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳಿಂದಾಗಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗುತ್ತಿತ್ತು. ಈಗ ಪರೀಕ್ಷಾ ಕ್ರಮವನ್ನೇ ಬದಲಾಯಿಸುತ್ತಿರುವುದು ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ಉದ್ದೇಶವನ್ನು ಹೊಂದಿದೆ. ಮುಂದಿನ ವರ್ಷದ ಪರೀಕ್ಷಾ ದಿನಾಂಕ ಮತ್ತು ಇತರ ತಾಂತ್ರಿಕ ಮಾಹಿತಿಗಳನ್ನು ಶೀಘ್ರದಲ್ಲೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಕಟಿಸಲಿದೆ.
ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗುರುವಾರ (ಮೇ,14) ತಡರಾತ್ರಿ ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ತುರ್ತು ಸಭೆ ನಡೆಸಿದರು. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಿಬಿಐ (CBI) ತನಿಖೆಯು ಚುರುಕುಗೊಂಡಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಒಳಗಿನವರ ಕೈವಾಡದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಇದೀಗ ಇದರ ಜತೆಗೆ ಮಹತ್ವದ ಘೋಷಣೆಯನ್ನು ಕೂಡ ಮಾಡಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿಗೆ ಹೊಸ ಪರೀಕ್ಷಾ ದಿನಾಂಕಗಳನ್ನು ಘೋಷಿಸಲಾಗಿದೆ. ಜೂನ್ 21 ರಂದು ನಡೆಯಲಿದೆ.



.
.
.
.
.
.
.
.
.
.
.
.
.
.
.
.
.
.
.
.
