
ಬೆಂಗಳೂರು, ಮೇ 16: ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 3 ರಿಂದ 4 ದಿನಗಳ ಕಾಲ (ಮೇ 15 ರಿಂದ 18 ರವರೆಗೆ) ಕರ್ನಾಟಕದಾದ್ಯಂತ ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಗಲಿನಲ್ಲಿ ತಾಪಮಾನ ಏರಿಕೆಯಾಗಿ ಬಿಸಿಲಿನ ಬೇಗೆ ಮುಂದುವರಿದರೂ, ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಸಂಜೆ ಅಥವಾ ರಾತ್ರಿಯ ವೇಳೆಗೆ ಬಿರುಗಾಳಿ ಸಹಿತ ಸಾಧಾರಣದಿಂದ ಭಾರೀ ಮಳೆಯಾಗಲಿದೆ. ಸಿಡಿಲು ಮತ್ತು 40-50 ಕಿ.ಮೀ ವೇಗದ ಗಾಳಿಯ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಲಾಗಿದೆ.
ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತನ್ನ ಅಧಿಕೃತ X ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಕೋರಿದೆ.ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೇ 15, 16 ಹಾಗೂ 17 ರಂದು ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಮಳೆಯ ಜೊತೆಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೇಶದ ಕೃಷಿ ವಲಯದ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಮಳೆಯು ಈ ವರ್ಷ ನಿಗದಿತ ಸಮಯಕ್ಕಿಂತ ಒಂದು ವಾರ ಮುಂಚಿತವಾಗಿಯೇ ಅಂದರೆ ಮೇ 26 ರಂದೇ ಕೇರಳವನ್ನು ಪ್ರವೇಶಿಸಲಿದೆ ಎಂದು ಐಎಂಡಿ ತಿಳಿಸಿದೆ. ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ತಲುಪಿರುವ ಮುಂಗಾರು, ಅಲ್ಲಿಂದ ವೇಗವಾಗಿ ಭಾರತದ ಪ್ರಧಾನ ಭೂಭಾಗದತ್ತ ಮುನ್ನಡೆಯುತ್ತಿದೆ. ಕೇರಳಕ್ಕೆ ಮುಂಗಾರು ಅಪ್ಪಳಿಸಿದ ಕೇವಲ ಒಂದು ವಾರದಲ್ಲಿ, ಅಂದರೆ ಜೂನ್ ಮೊದಲ ವಾರದಲ್ಲೇ ಕರ್ನಾಟಕಕ್ಕೂ ಮುಂಗಾರು ಪ್ರವೇಶಿಸಲಿದೆ.



.
.
.
.
.
.
.
.
.
.
.
.
.
.
.
.
.
.
.
.
