
ಕಾರ್ಕಳ, ಮೇ.18:ಕಳೆದ 3 ತಿಂಗಳಿನಿಂದ ಜಾಂಡೀಸ್ ನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಹೊಸ್ಮಾರು ಈದು ಗ್ರಾಮದ ಹರೀಶ್ ಮೂಲ್ಯ(40ವ) ಮೃತಪಟ್ಟವರು.
ಕೊಣಾಜೆಯ ಚಿಕನ್ ಸೆಂಟರ್ ಒಂದರಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದ ಅವರು ಕಳೆದ 3 ತಿಂಗಳಿನಿಂದ ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದರು. ಎಂದಿನಂತೆ ಮೇ.16 ರಂದು ರಾತ್ರಿ ಮನೆಯಲ್ಲಿ ಮಲಗಿದ್ದವರು ಮರುದಿನ ಬೆಳಗ್ಗೆ ಏಳದೇ ಇದ್ದ ಅವರನ್ನು ಎಬ್ಬಿಸಿದಾಗ ಯಾವುದೇ ಪ್ರತಿಕ್ರಿಯೆ ನೀಡದ ಕಾರಣ ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅ ವೇಳೆಗಾಗಲೇ ಅವರು ಮೃತಪಟ್ಟಿದ್ದರು.
ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
