
ಕಾರ್ಕಳ, ಮೇ.18: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ರಾಜಾರೋಷವಾಗಿ ನಡೆಯುತ್ತಿದ್ದು, ಪೊಲೀಸರು ಈ ಚಟುವಟಕೆಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.
ಕಾರ್ಕಳ ತಾಲೂಕಿನ ಬೋಳ ಗ್ರಾಮದ ಇಚ್ಚೋಡಿ ಎಂಬಲ್ಲಿ ಶಾಂಭವಿ ನದಿಯಲ್ಲಿ ಸ್ಥಳೀಯ ಗುತ್ತಿಗೆದಾರ ಜಯರಾಮ ಸಾಲ್ಯಾನ್ ಎಂಬವರು ಸರ್ಕಾರಕ್ಕೆ ರಾಜಧನ ಪಾವತಿಸದೇ ಅಕ್ರಮವಾಗಿ ಮರಳು ತೆಗೆಯುತ್ತಿದ್ದಾರೆ ಎನ್ನುವ ಮಾಹಿತಿ ಪಡೆದ ಕಾರ್ಕಳ ಗ್ರಾಮಾಂತರ ಠಾಣೆಯ ಪಿಎಸ್‌ಐ ಪ್ರಸನ್ನ ಎಂ.ಎಸ್ ಅವರ ತಂಡ ಮಂಗಳವಾರ ಬೆಳಗ್ಗೆ ದಾಳಿ ನಡೆಸಿ, ಹಿಟಾಚಿ ಯಂತ್ರಗಳ ಮೂಲಕ ತೆಗೆದು ಸಂಗ್ರಹಿಸಲಾಗಿದ್ದ ಸುಮಾರು 40 ಸಾವಿರ ಮೌಲ್ಯದ 5 ಲೋಡ್ ಮರಳನ್ನು ವಶಪಡಿಸಿಕೊಂಡು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
