Share this news

ಬೆಂಗಳೂರು,ಮೇ.24:ಜೈಲು ಶಿಕ್ಷೆ ಅನುಭವಿಸುತ್ತಿದ್ದ ಖೈದಿಯೊಬ್ಬ ದೇಶದ ನ್ಯಾಯಾಂಗ ವ್ಯವಸ್ಥೆಯ ಕಣ್ಣಿಗೆ ಮಣ್ಣೆರಚಿ ಜೈಲಿನಿಂದ ಪರಾರಿಯಾದ ಘಟನೆ ಬರೋಬ್ಬರಿ 8 ವರ್ಷಗಳ ಬಳಿಕ ಬೆಳಕಿಗೆ ಬಂದಿದೆ.

ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಹೆಸರಲ್ಲಿ ನಕಲಿ ಆದೇಶ ಪತ್ರ ಸೃಷ್ಟಿಸಿ, ಜೈಲು ಅಧಿಕಾರಿಗಳ ಕಣ್ಣಿಗೆ ಮಣ್ಣೆರಚಿ ಜೈಲಿನಿಂದ ರಾಜಾರೋಷವಾಗಿ ಬಿಡುಗಡೆಯಾಗಿದ್ದ ಖತರ್ನಾಕ್ ಅಪರಾಧಿಯ ಮಹಾ ವಂಚನೆಯ ವಿರುದ್ಧ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?
ಕಳೆದ 2001ರಲ್ಲಿ ತಮಿಳುನಾಡು ಮೂಲದ ಶಂಕರ್ ಆರ್ಮುಗಂ ಮತ್ತು ಆತನ ಗ್ಯಾಂಗ್, ಹಣಕ್ಕಾಗಿ ವ್ಯಕ್ತಿಯೊಬ್ಬನನ್ನು ಕಿಡ್ನಾಪ್ ಮಾಡಿತ್ತು. ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಬೆಂಗಳೂರಿನ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯವು, ಶಂಕರ್‌ನನ್ನು ಅಪರಾಧಿ ಎಂದು ಘೋಷಿಸಿತ್ತು. ಹಣಕ್ಕಾಗಿ ಅಪಹರಣ (ಸೆಕ್ಷನ್ 364A) ಮತ್ತು ಅಪರಾಧಿಕ ಸಂಚು (ಸೆಕ್ಷನ್ 120B) ಅಡಿಯಲ್ಲಿ ನ್ಯಾಯಾಲಯವು ಈತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಕೋರ್ಟ್ ಆದೇಶದಂತೆ ಆರೋಪಿ ಶಂಕರ್‌ನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು.
ಇತ್ತ ಜೈಲು ಶಿಕ್ಷೆ ಅನುಭವಿಸುತ್ತಿದ್ದ
ಶಂಕರ್ ಆರ್ಮುಂ ಬಿಡುಗಡೆಯಾಗಲು ಸಿನಿಮೀಯ ರೀತಿಯಲ್ಲಿ ಮಹಾಸಂಚು ರೂಪಿಸಿದ್ದ. ತನಗೆ ಸುಪ್ರೀಂ ಕೋರ್ಟ್‌ನಿಂದ ಬಿಡುಗಡೆ ಆದೇಶ ಸಿಕ್ಕಿದೆ ಎಂದು ಬಿಂಬಿಸುವ ಸಲುವಾಗಿ ಸುಪ್ರೀಂ ಕೋರ್ಟ್‌ನ ನಕಲಿ ಮುದ್ರೆ ಹಾಗೂ ಸಹಿ ಇರುವ ಫೋರ್ಜರಿ ದಾಖಲೆಗಳನ್ನು ಸೃಷ್ಟಿಸಿದ್ದ. ನವೆಂಬರ್ 13, 2018 ರಂದು ಈ ನಕಲಿ ಆದೇಶ ಪತ್ರದೊಂದಿಗೆ 10 ಸಾವಿರ ರೂಪಾಯಿ ದಂಡವನ್ನು ಶಂಕರ್ ಕಡೆಯವರು ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳಿಗೆ ಪಾವತಿಸಿದ್ದರು. ಇದನ್ನು ನಿಜವಾದ ಆದೇಶ ಎಂದು ನಂಬಿದ ಜೈಲಧಿಕಾರಿಗಳು ಆತನನ್ನು ಬಿಡುಗಡೆ ಮಾಡಿದ್ದರು. ಬಿಡುಗಡೆ ಬಳಿಕ ಆತ ಪರಾರಿಯಾಗಿದ್ದ.

ಬಿಡುಗಡೆಯಾದ 8 ವರ್ಷಗಳ ಬಳಿಕ ಪ್ರಕರಣ ಬೆಳಕಿಗೆ!:

ಜೈಲು ಅಧಿಕಾರಿಗಳ ಕಣ್ಣಿಗೆ ಮಣ್ಣೆರಚಿ ಜೈಲಿನಿಂದ ಬಿಡುಗಡೆಯಾಗಿದ್ದ ಶಂಕರ್ ಕಥೆ ಮುಗಿಯಿತು ಎನ್ನುವಾಗಲೇ ಇತ್ತೀಚೆಗೆ ಜೈಲು ಇಲಾಖೆಯ ಮಹಾನಿರ್ದೇಶಕರಿಗೆ (DG) ಒಂದು ಆಘಾತಕಾರಿ ಅನಾಮಧೇಯ ಪತ್ರ ಬಂದಿತ್ತು. ಆ ಪತ್ರದಲ್ಲಿ ಶಂಕರ್ ನಕಲಿ ದಾಖಲೆ ನೀಡಿ ಓಡಿಹೋಗಿರುವ ಬಗ್ಗೆ ಉಲ್ಲೇಖಿಸಲಾಗಿತ್ತು.ಈ ಅನಾಮಧೇಯ ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಿದ ಜೈಲು ಇಲಾಖೆ ಆಂತರಿಕ ತನಿಖೆಗೆ ಆದೇಶಿಸಿತ್ತು. ತನಿಖೆಯ ವೇಳೆ ಜೈಲಾಧಿಕಾರಿಗಳು ಸುಪ್ರೀಂ ಕೋರ್ಟ್‌ನಿಂದ ಈ ಆದೇಶದ ಸತ್ಯಾಸತ್ಯತೆಯನ್ನು ಮರು ಪರಿಶೀಲಿಸಿದಾಗ, ಸುಪ್ರೀಂ ಕೋರ್ಟ್‌ನಿಂದ ಅಂತಹ ಯಾವುದೇ ಬಿಡುಗಡೆ ಆದೇಶ ಬಂದಿಲ್ಲ, ಶಂಕರ್ ಸಲ್ಲಿಸಿದ್ದು ನಕಲಿ ಪತ್ರ ಎಂಬ ಕಹಿ ಸತ್ಯ ಹೊರಬಿದ್ದಿದೆ.

ಜೈಲಧಿಕಾರಿಗಳ ಶಾಮೀಲು ಶಂಕೆ :
ದೇಶದ ಅತ್ಯುನ್ನತ ನ್ಯಾಯಾಲಯದ ಆದೇಶವನ್ನು ಜೈಲು ಅಧಿಕಾರಿಗಳು ಯಾವುದೇ ಮರು ಪರಿಶೀಲನೆ ಮಾಡದೇ ಹೇಗೆ ಬಿಟ್ಟರು? ಇದರಲ್ಲಿ ಜೈಲು ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವಿದೆಯೇ ಅಥವಾ ಅವರೂ ಸಹ ಆರೋಪಿಯೊಂದಿಗೆ ಶಾಮೀಲಾಗಿದ್ದಾರೆಯೇ? ಎಂಬ ಅನುಮಾನಗಳು ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಒಟ್ಟಿನಲ್ಲಿ ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಯನ್ನು ದಿಕ್ಕುತಪ್ಪಿಸುವ ಕುಕೃತ್ಯ ನಡೆದಿರುವುದು ಆಘಾತಕಾರಿ ವಿಚಾರವಾಗಿದೆ.

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

Leave a Reply

Your email address will not be published. Required fields are marked *