
ಬೆಂಗಳೂರು, ಮೇ 25: ಕಾಂಗ್ರೆಸ್ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳ ಪೈಕಿ ಎರಡು ಅತ್ಯಂತ ಜನಪ್ರಿಯ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಮರು ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಎಸ್ಐಆರ್ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದ್ದು, ಮೃತಪಟ್ಟವರು, ತೆರಿಗೆ ಪಾವತಿದಾರರು ಹಾಗೂ ಒಂದೇ ಮನೆಯಲ್ಲಿ ಇಬ್ಬಿಬ್ಬರು ಹಣ ಪಡೆಯುತ್ತಿರುವಂತಹವರನ್ನು ಕೈಬಿಡಲು ಸಿಎಂ, ಡಿಸಿಎಂ ಚಿಂತನೆ ನಡೆಸಿದ್ದಾರೆ. 1.24 ಕೋಟಿ ಗೃಹಲಕ್ಷ್ಮೀ ಫಲಾನುಭವಿಗಳ ಪರಿಶೀಲನೆ ನಡೆಯಲಿದೆ. ಈ ನಿರ್ಧಾರಕ್ಕೆ ಪ್ರಮುಖ ಕಾರಣಗಳೆಂದರೆ, ಯೋಜನೆಯಲ್ಲಿ ಪಾರದರ್ಶಕತೆ ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ದೊರೆಯುವಂತೆ ಮಾಡುವುದಾಗಿದೆ.
ಪ್ರಸ್ತುತ ರಾಜ್ಯದಲ್ಲಿ ಬರೋಬ್ಬರಿ 1 ಕೋಟಿ 24 ಲಕ್ಷಕ್ಕೂ ಹೆಚ್ಚು ಗೃಹಲಕ್ಷ್ಮಿ ಫಲಾನುಭವಿಗಳಿದ್ದಾರೆ. ಇಷ್ಟು ದೊಡ್ಡ ಪ್ರಮಾಣದ ಫಲಾನುಭವಿಗಳ ಪಟ್ಟಿಯಲ್ಲಿ ಹಲವು ತಾಂತ್ರಿಕ ದೋಷಗಳು ಹಾಗೂ ನಿಯಮ ಉಲ್ಲಂಘನೆಗಳು ಪತ್ತೆಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ.ಸರ್ಕಾರದ ನಿಯಮಾವಳಿಗಳ ಪ್ರಕಾರ ಆದಾಯ ತೆರಿಗೆ ಕಟ್ಟುವವರು ಗ್ಯಾರಂಟಿ ಯೋಜನೆಗಳಿಗೆ ಅನರ್ಹರು. ಆದರೆ, ಐಟಿ ರಿಟರ್ನ್ಸ್ ಸಲ್ಲಿಸುತ್ತಿರುವ ಲಕ್ಷಾಂತರ ಶ್ರೀಮಂತ ಕುಟುಂಬಗಳೂ ಈ ಯೋಜನೆಯ ಲಾಭ ಪಡೆಯುತ್ತಿರುವುದು ಬೆಳಕಿಗೆ ಬಂದಿದೆ.
ಈ ಎಲ್ಲಾ ಅಕ್ರಮಗಳನ್ನು ಮತ್ತು ಅನರ್ಹ ಫಲಾನುಭವಿಗಳನ್ನು ಗುರುತಿಸಿ ಪಟ್ಟಿಯಿಂದ ಕೈಬಿಡುವ ಸಲುವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಮಗ್ರ ಪರಿಶೀಲನೆಗೆ ಚಿಂತನೆ ನಡೆಸಲಾಗಿದೆ. ಈ ಸಂಬಂಧ ಶೀಘ್ರದಲ್ಲೇ ಹೊಸ ನಿಯಮಾವಳಿಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ.



.
.
.
.
.
.
.
.
.
.
.
.
.
.
.
.
.
.
.
.
