
ಕಾರ್ಕಳ, ಮೇ. 26: ಕಾರ್ಕಳ ತಾಲೂಕು ಮರ್ಣೆ ಗ್ರಾಮದ ದೆಪ್ಪುತ್ತೆ ಚಾಮುಂಡೇಶ್ವರಿ ದೇವಸ್ಥಾನದ ಬಳಿ ಬೈಕಿಗೆ ಕಾರು ಢಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋಮವಾರ ಬೆಳಿಗ್ಗೆ ಈ ಅಪಘಾತ ಸಂಭವಿಸಿದ್ದು, ಪ್ರಶಾಂತ್ ಎಂಬವರ ಕಾರು ಅಜೆಕಾರಿನಿಂದ ದೆಪ್ಪುತ್ತೆ ಕಡೆಗೆ ಬರುತ್ತಿದ್ದ ಸುರೇಂದ್ರ ಎಂಬವರ ಬೈಕಿಗೆ ಢಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
