
ಬೆಂಗಳೂರು, ಮೇ. 27: 2026-27ನೇ ಶೈಕ್ಷಣಿಕ ಸಾಲಿನ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ (RTE)-2009ರ ಅಡಿಯಲ್ಲಿ ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ ಉಚಿತ ಪ್ರವೇಶಕ್ಕಾಗಿ ಮೊದಲ ಸುತ್ತಿನ ಆನ್‌ಲೈನ್ ಲಾಟರಿ ಪ್ರಕ್ರಿಯೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಛೇರಿ ತಿಳಿಸಿದೆ.
ಮೇ 25, 2026 ರಂದು ಆನ್‌ಲೈನ್ ಲಾಟರಿ ಪ್ರಕ್ರಿಯೆಯನ್ನು ನಡೆಸಲಾಗಿದ್ದು, ಅರ್ಹ ಮಕ್ಕಳನ್ನು ಆಯಾ ಶಾಲೆಗಳಿಗೆ ಹಂಚಿಕೆ ಮಾಡಲಾಗಿದೆ. ಆಯ್ಕೆಯಾದ ಮಕ್ಕಳ ಪೋಷಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ SMS ಮೂಲಕ ಸೀಟು ಹಂಚಿಕೆಯ ವಿವರಗಳನ್ನು ಈಗಾಗಲೇ ರವಾನಿಸಲಾಗಿದೆ.
ಸೀಟು ಲಭಿಸಿರುವ ಮಗುವಿನ ಪೋಷಕರು ದಿನಾಂಕ: 26.05.2026 ರಿಂದ 08.06.2026 ರೊಳಗೆ ಸೀಟು ಹಂಚಿಕೆ ಪತ್ರದೊಂದಿಗೆ ಸಂಬಂಧಪಟ್ಟ ಶಾಲೆಗಳಿಗೆ ಭೇಟಿ ನೀಡಿ ದಾಖಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗಿ ಕೋರಲಾಗಿದೆ.
ವ ಸೀಟು ಹಂಚಿಕೆಯ ಸಂಪೂರ್ಣ ವಿವರಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ www.schooleducation.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ.
ನಿಗದಿತ ಅಂತಿಮ ದಿನಾಂಕದೊಳಗೆ ಪೋಷಕರು ತಮ್ಮ ಮಕ್ಕಳನ್ನು ಹಂಚಿಕೆಯಾದ ಶಾಲೆಗಳಿಗೆ ದಾಖಲಿಸುವ ಮೂಲಕ ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.



.
.
.
.
.
.
.
.
.
.
.
.
.
.
.
.
.
.
.
.
