
ಕಾರ್ಕಳ,ಮೇ.29: ಕಾರ್ಕಳ ತಾಲೂಕು ಈದು ಗ್ರಾಮದ ಹೊಸ್ಮಾರು ಎಂಬಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದ ಮದ್ಯವ್ಯಸನಿ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಬೆಳ್ತಂಗಡಿ ನಾರಾವಿಯ ಆನಂದ (50) ವಿಪರೀತ ಕುಡಿತದ ಚಟವನ್ನು ಹೊಂದಿದ್ದು, ಮೇ.24ರಂದು ವಿಪರೀತ ಮದ್ಯಪಾನ ಮಾಡಿ ಹೊಸ್ಮಾರಿನಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆನಂದ ಬುಧವಾರ (ಮೇ.27) ರಾತ್ರಿ ಮೃತಪಟ್ಟಿದ್ದಾರೆ.
ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
