
ಕಾರ್ಕಳ,ಮೇ.29: ಕುಕ್ಕುಂದೂರು ಗ್ರಾಮದ ಆನಂದಿ ಮೈದಾನ ನಕ್ರೆ ಪೊಸನಟ್ಟು ಸಂಪರ್ಕ ರಸ್ತೆ ದುರಸ್ತಿಯ ಬಗ್ಗೆ ಸ್ಥಳೀಯರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದÀ ಶಾಸಕರಾದ ವಿ ಸುನಿಲ್ ಕುಮಾರ್ ರವರು ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು 70ಲಕ್ಷ ರೂ. ಅನುದಾನವನ್ನು ಒದಗಿಸಿ ಮೇ 27 ರಂದು ನಮನಪುರ ಪೊಸನೊಟ್ಟು ಕ್ರಾಸ್ ಬಳಿ ಗುದ್ದಲಿ ಪೂಜೆ ನೆರವೇರಿಸಿ ಕಾಯಿ ಒಡೆದು ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಜ್ಯೋತಿ ನಗರ ಕೊಂಡೇನಾಕ್ಯಾರು ಗುಳಿಗ ಸ್ಥಾನ ರಸ್ತೆ ಕಾಮಗಾರಿಗೆ 55 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಯಿತು.
ಈ ಸಂಧರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ರವೀಂದ್ರ ಕುಮಾರ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಂತೋನಿ ಡಿಸೋಜಾ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶಶಿಮಣಿ ಸಂಪತ್, ಪ್ರಶಾಂತ್ ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷರಾದ ರಾಕೇಶ್ ಶೆಟ್ಟಿ, ಯೋಗಿಶ್ ಸಾಲ್ಯಾನ್, ಶೇಖರ್ ಸುವರ್ಣ, ಪ್ರಸಾದ್, ಪ್ರಾಣೇಶ್ ಶೆಟ್ಟಿ ಹರೀಶ್ ಕುಂದರ್, ಜಯಕರ ಮಡಿವಾಳ ಮಧುಕರ ಸುವರ್ಣ ಮೊದಲಾದ ಪರಿಸರದ ಪ್ರಮುಖರು ಉಪಸ್ಥಿತರಿದ್ದು ಶಾಸಕರಿಗೆ ಅಭಿನಂದನೆ ಸಲ್ಲಿಸಿದರು.



.
.
.
.
.
.
.
.
.
.
.
.
.
.
.
.
.
.
.
.
