
ಕಾರ್ಕಳ,ಮೇ.30: ಕಾರ್ಕಳ ತಾಲೂಕು ಮುಂಡ್ಕೂರು-ಮೂಡಬಿದ್ರೆ ಹೆದ್ದಾರಿಯಲ್ಲಿ ರಿಕ್ಷಾಕ್ಕೆ ಕಾರು ಡಿಕ್ಕಿಯಾದ ಪರಿಣಾಮ ರಿಕ್ಷಾದಲ್ಲಿದ್ದ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಮೇ.29 ರಂದು ಸಂಜೆ ಮಹಮ್ಮದ್ ಕೈಫ್ ಎಂಬವರು ರಿಕ್ಷಾದಲ್ಲಿ ಶ್ರೀಕಾಂತ್ ಎಂಬವರನ್ನು ಕುಳ್ಳಿರಿಸಿಕೊಂಡು ಸಚ್ಚರಿಪೇಟೆಯಿಂದ ಜಾರಿಗೆಕಟ್ಟೆ ಕಡೆಗೆ ಹೋಗುತ್ತಿದ್ದಾಗ ಮುಂಡ್ಕೂರಿನಿಂದ ಸಚ್ಚರಿಪೇಟೆ ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿಯಾದ ಪರಿಣಾಮ ಆಟೋ ರಿಕ್ಷಾ ಮಗುಚಿ ಬಿದ್ದಿದ್ದು, ಅದರಲ್ಲಿದ್ದ ಪ್ರಯಾಣಿಕ ಶ್ರೀಕಾಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೂಡಲೇ ಅವರನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
