
ಬೆಂಗಳೂರು, ಜೂ.04: ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆದ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ರಾಜ್ಯದ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ಕೆ ಹರಿಪ್ರಸಾದ್ ಆರಂಭದಲ್ಲೇ ಪಕ್ಷ ಸಂಘಟನೆ ವಿಚಾರದಲ್ಲಿ ಖಡಕ್ ಹೇಳಿಕೆ ನೀಡಿದ್ದಾರೆ.
ಪಕ್ಷ ಸಂಘಟನೆ ಕುರಿತು ಪತ್ರಕರ್ತರ ಜೊತೆ ಮಾತನಾಡಿದ ಅವರು, ಅಧಿಕಾರ, ಪದವಿ ಬೇಕಾದವರು ಡಿ ಕೆ ಶಿವಕುಮಾರ್ ಜೊತೆಗೆ ಹೋಗಿ, ಯಾರು ಕಾಂಗ್ರೆಸ್ ಪಕ್ಷ ಬಲಪಡಿಸಬೇಕು, ರಾಹುಲ್ ಗಾಂಧಿಯವರ ಅಶಯ ಈಡೇರಿಸಬೇಕು ಎನ್ನುವವರು ನನ್ನ ಜೊತೆ ಬನ್ನಿ ಎಂಬ ಹೇಳಿಕೆ ಇದೀಗ ಕಾಂಗ್ರೆಸ್ ಪಕ್ಷದೊಳಗೆ ವಿವಾದದ ಕಿಡಿ ಹೊತ್ತಿಸಿದ್ದು, ಈ ಹೇಳಿಕೆಯಿಂದ ಕಾಂಗ್ರೆಸ್ ಶಾಸಕರು ಅಸಮಾಧಾನಿತರಾಗಿದ್ದು, ಇದು ಪರೋಕ್ಷವಾಗಿ ಸಿಎಂ ಡಿಕೆ ಶಿವಕುಮಾರ್ ಬಣಕ್ಕೆ ನೀಡಿರುವ ಎಚ್ಚರಿಕೆಯಾಗಿದೆ ಎನ್ನಲಾಗಿದೆ.
ಸಿಎಂ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದರೂ ಅವರ ಸಂಪುಟದಲ್ಲಿ ಬಹುತೇಕ ಸಿದ್ದು ಬಣದ ಬೆಂಬಲಿಗರೇ ಸಚಿವರಾಗಿದ್ದು, ಅಲ್ಲದೇ ಸಿದ್ಧರಾಮಯ್ಯನವರ ಆಪ್ತ ಬಿ.ಕೆ ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟು ಪರೋಕ್ಷವಾಗಿ ಡಿಕೆ ಶಿವಕುಮಾರ್ ಅವರನ್ನು ಕಟ್ಟಿಹಾಕುವ ತಂತ್ರಗಾರಿಕೆಯೂ ಅಡಗಿದೆ ಎನ್ನುವ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬಂದಿದೆ.ಅಧಿಕಾರ ಹಸ್ತಾಂತರದ ವಿಚಾರದಲ್ಲಿ ಸಿದ್ಧರಾಮಯ್ಯನವರ ತ್ಯಾಗವನ್ನು ಕಾಂಗ್ರೆಸ್ ಹೈಕಮಾಂಡ್ ಎಂದೂ ಮರೆಯಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಸಿದ್ಧರಾಮಯ್ಯನವರ ಆಶಯದಂತೆ ಆಡಳಿತ ನಡೆಸುವ ಎಲ್ಲಾ ಲಕ್ಷಣಗಳು ಸ್ಪಷ್ಟವಾಗಿದೆ.


.
.
.
.
.
.
.
.
.
.
.
.
.
.
.
.
.
.
.
.
