
ಬೆಂಗಳೂರು, ಜೂ.5: ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆಗಳ ಹಂಚಿಕೆಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಅಸಮಧಾನದ ಅಲೆ ಎದ್ದಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಇಂದು ಬೆಳಿಗ್ಗೆ ಸುದ್ದಿಗೋಷ್ಟಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, 2023 ರಲ್ಲಿ ಡಿಕೆ ಶಿವಕುಮಾರ್ ಅವರು ಡಿಸಿಎಂ ಆಗಿದ್ದಾಗ, ನನಗೆ ಸಾರಿಗೆ ಇಲಾಖೆ ನೀಡಿದ ಸಂದರ್ಭದಲ್ಲಿ, ‘ನಾನು ಮುಖ್ಯಮಂತ್ರಿಯಾದಾಗ ಬೆಂಗಳೂರು ನಗರಾಭಿವೃದ್ಧಿ ಖಾತೆ ನನ್ನ ಬಳಿ ಇರುತ್ತದೆ, ಅದನ್ನೇ ನಿಮಗೆ ನೀಡುತ್ತೇನೆ’ ಎಂದು ಭರವಸೆ ನೀಡಿದ್ದರು. ಆದರೆ ಈಗ ಜಲಸಂಪನ್ಮೂಲ ಖಾತೆ ನೀಡಿದ್ದಾರೆ. ಆ ಖಾತೆಯಲ್ಲಿ ಕೆಲಸ ಮಾಡಲು ನನಗೆ ಆತ್ಮಸಾಕ್ಷಿ ಒಪ್ಪುತ್ತಿಲ್ಲ. ಆದ್ದರಿಂದ ರಾಜೀನಾಮೆ ನೀಡಲು ಮುಂದಾಗಿದ್ದೇನೆ ಎಂದರು.
ಬೆAಗಳೂರು ನಗರಾಭಿವೃದ್ಧಿ ಖಾತೆಯು ಕೃಷ್ಣ ಬೈರೇಗೌಡರ ಪಾಲಾಗಿದೆ. ಜಲಸಂಪನ್ಮೂಲ ಖಾತೆ ರಾಮಲಿಂಗಾ ರೆಡ್ಡಿ ಅವರಿಗೆ ಲಭಿಸಿದೆ. ರಾಮಲಿಂಗಾ ರೆಡ್ಡಿ ಅವರನ್ನು ಮನವೊಲಿಸಲು ಗುರುವಾರ ಡಿಕೆ ಶಿವಕುಮಾರ್ ಪ್ರಯತ್ನಿಸಿದ್ದರು. ಆದರೆ, ಹೈಕಮಾಂಡ್ ನಾಯಕರಾದ ಸುರ್ಜೆವಾಲಾ ಮತ್ತು ಕೆಸಿ ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿದ ನಂತರವೂ ಹೈಕಮಾಂಡ್‌ನಿAದ ಅನುಮೋದನೆ ದೊರೆಯದ ಕಾರಣ, ಡಿಕೆ ಶಿವಕುಮಾರ್ ಪ್ರಯತ್ನ ಫಲಕಾರಿಯಾಗಲಿಲ್ಲ ಎನ್ನಲಾಗಿದೆ.


.
.
.
.
.
.
.
.
.
.
.
.
.
.
.
.
.
.
.
.
