
ಕಾರ್ಕಳ, ಜೂ. 5:ಕಾರ್ಕಳ ತಾಲೂಕಿನ ಮುಡಾರು ಗ್ರಾಮದಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಡಾರು ನಿವಾಸಿ ಹರೀಶ್ ದೇವಾಡಿಗ(42) ಆತ್ಮಹತ್ಯೆ ಮಾಡಿಕೊಂಡವರು. ಅವರಿಗೆ ಕಳೆದ 12 ವರ್ಷಗಳ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ವಿಪರೀತ ಕುಡಿತದ ಚಟ ಹೊಂದಿದ್ದ ಅವರು ಪ್ರತಿದಿನ ಕುಡಿದು ಪತ್ನಿಯ ಜೊತೆ ಜಗಳವಾಡುತ್ತಿದ್ದರು. ಅದರಿಂದ ಬೇಸತ್ತ ಪತ್ನಿ 6 ವರ್ಷಗಳ ಹಿಂದೆ ಪತಿಯನ್ನು ಬಿಟ್ಟು ಹೋಗಿದ್ದರು. ಅದೇ ಕಾರಣಕ್ಕೆ ಹರೀಶ್ ದೇವಾಡಿಗ ಮನನೊಂದಿದ್ದು, ತನ್ನ ಕುಡಿತದ ಚಟದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜೂ. 3 ರಂದು ರಾತ್ರಿ ಮನೆಯ ಜಗಲಿಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


.
.
.
.
.
.
.
.
.
.
.
.
.
.
.
.
.
.
.
.
