
ಬೆಂಗಳೂರು,ಜೂ.06: ಕೋಟ್ಯಾಂತರ ಹಿಂದೂಗಳ ಪೂಜ್ಯನೀಯವಾದ ಗೋವುಗಳನ್ನು ದೇಶದ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಒತ್ತಾಯಿಸಿ ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳು ಬೆಂಗಳೂರಿನಲ್ಲಿ ಬೃಹತ್ ಧರಣಿ ನಡೆಸಿವೆ.
ಅಂಜುಮನ್ ಕಮಿಟಿ ಹಾಗೂ ಮುಸ್ಲಿಂ ಸಂಘಟನೆಗಳ ನೇತೃತ್ವದಲ್ಲಿ ಜಂಟಿಯಾಗಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ಧರಣಿಯಲ್ಲಿ ಪಾಲ್ಗೊಂಡಿದ್ದ ನೂರಾರು ಮುಸ್ಲಿಂ ಮುಖಂಡರು ಹಾಗೂ ಸಾರ್ವಜನಿಕರು, ಭಾರತ್ ಮಾತಾ ಕೀ ಜೈ ಘೋಷಣೆ ಕೂಗುವ ಮೂಲಕ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” ಎಂಬ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಗ್ರಹವನ್ನು ಸರ್ಕಾರದ ಮುಂದಿಟ್ಟರು.
ಮುಸ್ಲಿA ಸಮಾಜದ ವಿವಿಧ ಒಕ್ಕೂಟಗಳು ಮತ್ತು ತಾಲೂಕು ಮುಸ್ಲಿಂ ಸಂಘಟನೆಗಳು ಈ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಸೂಚಿಸಿದ್ದು, ದೇಶದಲ್ಲಿ ಗೋವಿಗೆ ಇರುವ ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಗೌರವಿಸಿ ತಕ್ಷಣವೇ ಕೇಂದ್ರ ಸರ್ಕಾರ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಅಧಿಕೃತವಾಗಿ ಘೋಷಿಸಬೇಕು ಎಂದು ಧರಣಿಯ ನೇತೃತ್ವ ವಹಿಸಿದ್ದ ಮುಖಂಡರು ಒತ್ತಾಯಿಸಿದ್ದಾರೆ.


.
.
.
.
.
.
.
.
.
.
.
.
.
.
.
.
.
.
.
.
