Share this news

 

 

 

ಉಡುಪಿ,ಜೂ.09: ಪ್ರಚಾರದ ತೆವಲಿನಿಂದ ದೇಶ ಭಕ್ತ ಸಂಘಟನೆಯಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ನಿರಂತರ ಕೀಳು ಮಟ್ಟದ ಹೇಳಿಕೆಗಳನ್ನು ನೀಡುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾರ್ಕಳದ ಸಾಮಾನ್ಯ ಕಾರ್ಯಕರ್ತನ ಮೇಲೆ ವಿನಾಕಾರಣ ಅಟ್ರಾಸಿಟಿ ಕೇಸ್ ದಾಖಲಿಸಿ ಬಂಧಿಸಿರುವುದು ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ಜವಾಬ್ದಾರಿಯುತ ಗೃಹ ಸಚಿವ ಎನ್ನುವುದನ್ನು ಮರೆತು ತನ್ನ ನಾಲಗೆಯ ಮೇಲೆ ಹಿಡಿತವಿಲ್ಲದಂತೆ ದೇಶದ ಪ್ರಧಾನಿ ಹಾಗೂ RSS ಕುರಿತು ಮನಬಂದಂತೆ ಮಾತನಾಡುವ ಪ್ರಿಯಾಂಕ್ ಖರ್ಗೆಗೆ ಅದೇ ದಾಟಿಯಲ್ಲಿ ಜನ ಸಾಮಾನ್ಯರು ಹಾಗೂ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಉತ್ತರ ನೀಡುತ್ತಿರುವುದು ಸಾಮಾನ್ಯ ಸಂಗತಿಯಾಗಿದೆ.

ಪ್ರಿಯಾಂಕ್ ಖರ್ಗೆ ಅವರ ದುರಂಹಕಾರದ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತನ್ನದೇ ಭಾಷೆಯಲ್ಲಿ ಉತ್ತರಿಸಿರುವ ಸಾಮಾನ್ಯ ಕಾರ್ಯಕರ್ತನ ಮೇಲೆ ಸುಳ್ಳು ಅಟ್ರಾಸಿಟಿ ಪ್ರಕರಣ ದಾಖಲಿಸಿ ಬಂಧಿಸಿರುವುದು ರಾಜ್ಯದ ಗೃಹ ಮಂತ್ರಿ ಎನಿಸಿರುವ ಪ್ರಿಯಾಂಕ್ ಖರ್ಗೆ ಅವರಿಗೆ ಶೋಭೆ ತರುವುದಿಲ್ಲ. ಇಂತಹ ಕ್ಷುಲ್ಲಕ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸುವ ಬದಲು ಪ್ರಿಯಾಂಕ್ ಖರ್ಗೆ ಅವರು ತಮ್ಮ ಸ್ವಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಿ, ರಾಜ್ಯದಲ್ಲಿ ನಿಷ್ಪಕ್ಷಪಾತವಾಗಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬದ್ದತೆ ತೋರಿಸಬೇಕು ಎಂದು ನವೀನ್ ಶೆಟ್ಟಿ ಸಲಹೆ ನೀಡಿದ್ದಾರೆ ‌
ಸಾಮಾಜಿಕ ಜಾಲತಾಣದಲ್ಲಿ ಆತ ನೀಡಿದ ಉತ್ತರದಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಿಸುವಂತಹ ಯಾವುದೇ ಅಂಶಗಳು ಇಲ್ಲದೇ ಇದ್ದರೂ ತನ್ನ ಸ್ವಯಂ ಪ್ರತಿಷ್ಠೆಗಾಗಿ ರಾಜ್ಯ ಗೃಹ ಇಲಾಖೆಯನ್ನು ಖರ್ಗೆ ಅವರು ದುರುಪಯೋಗ ಪಡಿಸಿಕೊಂಡಿರುವಂತೆ ಕಂಡುಬರುತ್ತಿದೆ. ಇಂತಹ ಕ್ಷುಲ್ಲಕ ನಡೆಗಳಿಂದ ಸಾಮಾನ್ಯ ಕಾರ್ಯಕರ್ತರನ್ನು ಹೆದರಿಸಬಹುದು ಎಂದು ಅವರು ಅಂದುಕೊಂಡಿದ್ದರೆ ಅದು ಖರ್ಗೆಯವರ ಭ್ರಮೆಯಾಗಿದೆ. ಇಂತಹ ಅನೇಕ ಸವಾಲುಗಳನ್ನು ಎದುರಿಸಿಕೊಂಡು ಬಂದು ಇಂದು ಬಿಜೆಪಿ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷ ಎನಿಸಿದೆ. ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ದೇಶವನ್ನಾಳಿದ ಸುಧೀರ್ಘ ಅವಧಿಯ ಚುನಾಯಿತ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಕಾಂಗ್ರೆಸ್ಸಿನ ಕೆಲವು ಹಿರಿಯ ಮುಖಂಡರು ಪ್ರಧಾನಿ ಮೋದಿ ಹಾಗೂ ಆರ್.ಎಸ್.ಎಸ್. ಬಗ್ಗೆ ಯಾವ ರೀತಿ ವಾಚಾಮಗೋಚರವಾಗಿ ಮಾತನಾಡಿ ತಮ್ಮ ಘನತೆ, ಗೌರವವನ್ನು ಕಳೆದುಕೊಳ್ಳುತ್ತಿದ್ದಾರೆ ಎಂಬ ಬಗ್ಗೆಯೂ ಪ್ರಿಯಾಂಕ್ ಖರ್ಗೆ ಅವರು ಆತ್ಮಾವಲೋಕನ ಮಾಡಿಕೊಳ್ಳುವುದು ಉತ್ತಮ. ಬಿಜೆಪಿ ಕಾರ್ಯಕರ್ತರು ಇಂತಹ ಪೊಳ್ಳು ಬೆದರಿಕೆಗಳಿಂದ ಎಂದೂ ದೃತಿಗೆಡುವುದಿಲ್ಲ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪೊಲೀಸ್ ಇಲಾಖೆಯನ್ನು ತನ್ನ ಕೈಗೊಂಬೆಯನ್ನಾಗಿಸಿ ಅನಗತ್ಯ ಕ್ಷುಲ್ಲಕ ವಿಚಾರಗಳಲ್ಲಿ ಮೂಗು ತೂರಿಸಿ ಗೊಂದಲ ಸೃಷ್ಟಿಸುವ ಬದಲು ಪ್ರಕರಣದ ಸತ್ಯಾಸತ್ಯತೆಯನ್ನು ಪುನರ್ ಪರಿಶೀಲಿಸಿ ಸಾಮಾನ್ಯ ಕಾರ್ಯಕರ್ತನ ಮೇಲೆ ವಿನಾಕಾರಣ ದಾಖಲಿಸಿರುವ ಅಟ್ರಾಸಿಟಿ ಪ್ರಕರಣವನ್ನು ಹಿಂಪಡೆದು ಪ್ರಕರಣವನ್ನು ಇತ್ಯರ್ಥಗೊಳಿಸಬೇಕು ಎಂದು ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ಅಗ್ರಹಿಸಿದ್ದಾರೆ.

   

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *