
ಕಾರ್ಕಳ,ಜೂ.12: ಕಾರ್ಕಳ ಪುರಸಭಾ ವ್ಯಾಪ್ತಿಯ ಕಾಬೆಟ್ಟಿನಲ್ಲಿ ನೂತನವಾಗಿ ನಿರ್ಮಾಣಗೊಂಡು ಉದ್ಘಾಟನೆಯಾಗಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯನ್ನು ಸರಕಾರ ರಚಿಸಿ ಆದೇಶಿಸಿದೆ.
ಪುರಸಭೆ ಮಾಜಿ ಅಧ್ಯಕ್ಷೆ ಪ್ರತಿಮಾ ರಾಣೆ, ಸುರೇಶ್ ಚೇತನಹಳ್ಳಿ ನಿಟ್ಟೆ ಮತ್ತು ಅಣ್ಣಪ್ಪ ನಕ್ರೆ ನಾಮನಿರ್ದೇಶಿತ ಸದಸ್ಯರಾಗಿ ನೇಮಕ ಗೊಂಡಿದ್ದಾರೆ. ಅಧ್ಯಕ್ಷರಾಗಿ ತಹಸೀಲ್ದಾರ್ ಕಾರ್ಕಳ, ಸದಸ್ಯರಾಗಿ ಕಾರ್ಕಳ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು,ಸಹಾಯಕ ಕಾರಕಾರಿ ಅಭಿಯಂತರರು ಜಿ.ಪಂ. ಎಂಜಿನಿಯರಿಂಗ್ ವಿಭಾಗ ಕಾರ್ಕಳ, ಮುಖ್ಯಾಧಿಕಾರಿಗಳು ಪುರಸಭೆ ಕಾರ್ಕಳ ಮತ್ತು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕಾರ್ಕಳ ಮತ್ತಿತರರು ಆಯ್ಕೆಯಾಗಿದ್ದಾರೆ.


.
.
.
.
.
.
.
.
.
.
.
.
.
.
.
.
.
.
.
.
