Share this news

 

 

 

 

 

 

 

ಬೆಂಗಳೂರು, ಜೂ.12: ನೆರೆಯ ರಾಜ್ಯ ಕೇರಳದಲ್ಲಿ ಕೋಝಿಕ್ಕೋಡ್‌ನಲ್ಲಿ ನಾಲ್ಕು ವರ್ಷದ ಬಾಲಕಿಯನ್ನು ಬಲಿ ಪಡೆದ ಮಾರಣಾಂತಿಕ ಶಿಗೆಲ್ಲೋಸಿಸ್ ಸೋಂಕು ತೀವ್ರವಾಗಿ ಹರಡುತ್ತಿದ್ದು, ಪೋಷಕರಲ್ಲಿ ಭಾರಿ ಆತಂಕ ಮೂಡಿಸಿದೆ. ಕರುಳಿನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಈ ಅಪಾಯಕಾರಿ ಬ್ಯಾಕ್ಟೀರಿಯಾ ಸೋಂಕು ವಯನಾಡು ಸೇರಿದಂತೆ ವಿವಿಧ ಜಿಲ್ಲೆಗಳ ಶಾಲಾ ಮಕ್ಕಳಲ್ಲಿ ವೇಗವಾಗಿ ಹರಡುತ್ತಿದೆ. . ಕೇರಳದ ಈ ಆತಂಕಕಾರಿ ಬೆಳವಣಿಗೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಆರೋಗ್ಯ ಇಲಾಖೆಯು ಗಡಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಹೈಅಲರ್ಟ್ ಘೋಷಿಸಿದೆ.

ಶಿಗೆಲ್ಲಾ ಎಂಬುದು ಅತ್ಯಂತ ಸಾಂಕ್ರಾಮಿಕ ಬ್ಯಾಕ್ಟೀರಿಯಾ ಆಗಿದೆ. ಇದು ಮುಖ್ಯವಾಗಿ ಮನುಷ್ಯನ ಜೀರ್ಣಾಂಗ ವ್ಯವಸ್ಥೆ ಹಾಗೂ ಕರುಳಿನ ಮೇಲೆ ತೀವ್ರವಾಗಿ ದಾಳಿ ಮಾಡುತ್ತದೆ. ಅನೈರ್ಮಲ್ಯ ಹೊಂದಿರುವ ಪ್ರದೇಶಗಳಲ್ಲಿ ಇದು ಅತಿ ವೇಗವಾಗಿ ಹರಡುತ್ತದೆ. ಕಲುಷಿತ ನೀರು, ಕಲುಷಿತ ಆಹಾರ ಸೇವನೆ ಹಾಗೂ ಶೌಚಾಲಯ ಬಳಕೆಯ ನಂತರ ಕೈಗಳನ್ನು ಸರಿಯಾಗಿ ಸ್ವಚ್ಛಗೊಳಿಸದಿದ್ದರೆ ಈ ಬ್ಯಾಕ್ಟೀರಿಯಾ ಒಬ್ಬರಿಂದ ಮತ್ತೊಬ್ಬರಿಗೆ ಹರಡಬಹುದು. ವಿಶೇಷವಾಗಿ 5 ವರ್ಷದೊಳಗಿನ ಚಿಕ್ಕ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಈ ಸೋಂಕು ಬೇಗನೆ ಅಟ್ಯಾಕ್ ಮಾಡುತ್ತದೆ. ಆರಂಭದಲ್ಲೇ ಪೋಷಕರು ನಿರ್ಲಕ್ಷ್ಯ ವಹಿಸಿದರೆ ಇದು ಮಕ್ಕಳ ಜೀವಕ್ಕೇ ಕಂಟಕವಾಗುವ ಸಾಧ್ಯತೆ ಇರುತ್ತದೆ ಎಂದು ಕೆಸಿಜಿ ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕರಾದ ಡಾ. ಲಕ್ಷ್ಮೀಪತಿ ಎಚ್ಚರಿಕೆ ನೀಡಿದ್ದಾರೆ.

ಸೋಂಕಿನ ಲಕ್ಷಣಗಳು:
ತೀವ್ರ ಜ್ವರ ಮತ್ತು ಅತಿಯಾದ ಆಯಾಸ, ದೌರ್ಬಲ್ಯ.
ಹೊಟ್ಟೆ ನೋವು ಮತ್ತು ಹೊಟ್ಟೆ ತೊಳಸುವಿಕೆ (ಸೆಳೆತ).
ನಿರಂತರ ವಾಂತಿ ಹಾಗೂ ತೀವ್ರ ರಕ್ತ ಮಿಶ್ರಿತ ಅತಿಸಾರ (ಭೇದಿ).
ದೇಹದಲ್ಲಿ ನೀರಿನಂಶ ಸಂಪೂರ್ಣ ಕಡಿಮೆಯಾಗಿ ತೀವ್ರ ನಿರ್ಜಲೀಕರಣ ಉಂಟಾಗುವುದು.

ಸೋAಕು ತಗುಲದಂತೆ ಮುಂಜಾಗೃತೆಯಾಗಿ ಮಕ್ಕಳಿಗೆ ಹೊರಗಿನ ಹಾಗೂ ಕಲುಷಿತ ನೀರು ಮತ್ತು ತೆರೆದಿಟ್ಟ ಆಹಾರ ನೀಡಬೇಡಿ. ಮಕ್ಕಳು ಆಹಾರ ಸೇವಿಸುವ ಮುನ್ನ ಹಾಗೂ ಶೌಚಾಲಯ ಬಳಕೆಯ ನಂತರ ಸಾಬೂನು ಬಳಸಿ 20 ಸೆಕೆಂಡುಗಳ ಕಾಲ ಕೈಗಳನ್ನು ಚೆನ್ನಾಗಿ ತೊಳೆಯುವುದನ್ನು ರೂಢಿಸಿ.ಕುಡಿಯಲು ಯಾವಾಗಲೂ ಸುರಕ್ಷಿತ ಹಾಗೂ ಚೆನ್ನಾಗಿ ಕಾಯಿಸಿ ಆರಿಸಿದ ಶುದ್ಧ ನೀರನ್ನೇ ಬಳಸಿ.ಹಸಿ ಅಥವಾ ಸರಿಯಾಗಿ ಬೇಯಿಸದ ಮಾಂಸ ಹಾಗೂ ಹಳಸಿದ ಆಹಾರ ಪದಾರ್ಥಗಳ ಸೇವನೆ ಬೇಡ.ಮಕ್ಕಳಲ್ಲಿ ಜ್ವರ ಅಥವಾ ಅತಿಸಾರದಂತಹ ಸಣ್ಣ ಲಕ್ಷಣಗಳು ಕಂಡುಬAದರೂ ಸ್ವಯಂ ಚಿಕಿತ್ಸೆ ಮಾಡದೆ ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ.

ರಾಜ್ಯದಲ್ಲಿ ಶಿಗೆಲ್ಲೋಸಿಸ್ ಆತಂಕ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ಆರೋಗ್ಯ ಇಲಾಖೆಯು ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮತ್ತು ಸರ್ಕಾರಿ ಆಸ್ಪತ್ರೆಗಳ ವೈದ್ಯರಿಗೆ ಮುನ್ನೆಚ್ಚರಿಕೆ ವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ಕುರಿತು ಆರೋಗ್ಯ ಇಲಾಖೆ ಸಚಿವ ಯುಟಿ ಖಾದರ್, ಗಡಿ ಭಾಗಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದ್ದು, ಪರಿಸ್ಥಿತಿಯ ಬಗ್ಗೆ ತಜ್ಞರೊಂದಿಗೆ ಸೂಕ್ತ ಚರ್ಚೆ ನಡೆಸಿ ರಾಜ್ಯದಲ್ಲಿ ಸೋಂಕು ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

   

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *