
ಕಾರ್ಕಳ, ಜೂ17: ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಗಂಡ ಹೆಂಡತಿ ನಡುವೆ ಜಗಳವಾಗಿ ಪತಿ ಪತ್ನಿಗೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ನಿಟ್ಟೆ ನಿವಾಸಿ ಧರ್ಮ ಅವರು ಪತ್ನಿ ಬೇಬಿ ಅವರೊಂದಿಗೆ ಪ್ರತಿನಿತ್ಯ ಜಗಳವಾಡುತ್ತಿದ್ದರು. ಜೂ.14 ರಂದು ಸಹ ಗಂಡ ಹೆಂಡತಿ ಜಗಳವಾಡಿ ಧರ್ಮ ಪತ್ನಿಗೆ ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಗಾಯಗೊಂಡ ಬೇಬಿ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
