
ಬೆಂಗಳೂರು,ಜೂ. 20: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದ್ದು, ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಹಳೆಯ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಹಾಗೂ ನೀರಿನ ಸಂಪರ್ಕ ಪಡೆಯಲು 15 ದಿನಗಳ ಕಾಲಾವಕಾಶ ನೀಡುವುದಾಗಿ ಘೋಷಿಸಿದ್ದಾರೆ. ತಮ್ಮ 2ನೇ ಕ್ಯಾಬಿನೆಟ್ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳೆಯ 2000ರ ಮೇ 31 ರ ಒಳಗೆ ಕಟ್ಟಡ ಪೂರ್ಣಗೊಂಡು ತಾತ್ಕಾಲಿಕ ಸಂಪರ್ಕ ಹೊಂದಿದ್ದರೇ, ಅಂತಹ ಕಟ್ಟಡಗಳಿಗೆ ಆದೇಶ ಪ್ರಕಟವಾದ ದಿನದಿಂದ 15 ದಿನಗಳ ಒಳಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಅವಕಾಶ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಅರ್ಜಿ ಸಲ್ಲಿಸುವವರು ಫಲಾನುಭವಿಗಳ ಫೋಟೋ, ಕಟ್ಟಡದ ಫೋಟೋ ಹಾಗೂ ಜಿಪಿಎಸ್ ಲೊಕೆಷನ್ ಜೊತೆಗೆ ಅರ್ಜಿ ಸಲ್ಲಿಸಬೇಕು. 31-05-2000 ನೇ ಇಸವಿಯೊಳಗೆ ಪೂರ್ಣಗೊಂಡ ಕಟ್ಟಡಗಳಿಗೆ ಮಾತ್ರ ಈ ಅವಕಾಶ ಇರಲಿದೆ. ಹೊಸದಾಗಿ ತರಾತುರಿಯಲ್ಲಿ ಕಟ್ಟಡ ಕಟ್ಟೋರಿಗೆ ಈ ರಿಯಾಯಿತಿ ಇರುವುದಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ರೈತರಿಗೆ ರೇಷ್ಮೆ ಹುಳು ಮನೆ, ಕೊಟ್ಟಿಗೆ, ಹೈನುಗಾರಿಕೆಗೆ ವಿನಾಯಿತಿ ನೀಡಲಾಗಿರುತ್ತದೆ ಎಂದು ತಿಳಿಸಿದರು.



.
.
.
.
.
.
.
.
.
.
.
.
.
.
.
.
.
.
.
.
