
ಕಾರ್ಕಳ,ಜೂ.23: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರುಡ್ಸೆಟ್ ಸಂಸ್ಥೆ ಹಾಗೂ ಕೆನರಾ ಬ್ಯಾಂಕ್ ಸಹಯೋಗದಲ್ಲಿ ಅಜೆಕಾರು ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಸ್ವಾವಲಂಬನೆಗಾಗಿ ಎರಡು ವಾರಗಳ ಉಚಿತ ಸ್ವ-ಉದ್ಯೋಗ ತರಬೇತಿ ಶಿಬಿರವು ಅಜೆಕಾರು ಪಂಚಾಯತ್ ಸಭಾಭವನದಲ್ಲಿ ನಡೆಯಿತು.
18 ರಿಂದ 50 ವಯೋಮಾನದ ಮಹಿಳೆಯರಿಗಾಗಿ ಆಯೋಜಿಸಲಾದ ಈ 14 ದಿನಗಳ ತರಬೇತಿಯಲ್ಲಿ ಕೃತಕ ಆಭರಣಗಳ ತಯಾರಿಕೆ, ಸೌಂದರ್ಯವರ್ಧಕ ಸೇವೆಗಳು, ಕೇಶ ವಿನ್ಯಾಸ, ಕೇಶಾಲಂಕಾರ, ಸೀರೆ ಉಡಿಸುವ ಕಲೆ ಸೇರಿದಂತೆ ವಿವಿಧ ಸ್ವ-ಉದ್ಯೋಗ ಕೌಶಲ್ಯಗಳ ಬಗ್ಗೆ ಸಮಗ್ರ ತರಬೇತಿ ನೀಡಲಾಯಿತು.
ತರಬೇತಿಯಲ್ಲಿ ಸುಮಾರು 35 ಮಂದಿ ಶಿಬಿರಾರ್ಥಿಗಳು ಭಾಗವಹಿಸಿ, ಹೊಸ ಕೌಶಲ್ಯಗಳನ್ನು ಕಲಿತು ಸ್ವಂತ ಉದ್ಯೋಗ ಆರಂಭಿಸುವ ಕುರಿತು ಮಾಹಿತಿ ಹಾಗೂ ಮಾರ್ಗದರ್ಶನ ಪಡೆದುಕೊಂಡರು.
ಮಹಿಳೆಯರ ಆತ್ಮವಿಶ್ವಾಸ ವೃದ್ಧಿ, ಆರ್ಥಿಕ ಸ್ವಾವಲಂಬನೆ ಹಾಗೂ ಕುಟುಂಬದ ಆದಾಯ ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮವು ಭಾಗವಹಿಸಿದ ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದ್ದು, ಗ್ರಾಮೀಣ ಮಹಿಳೆಯರ ಸಬಲೀಕರಣದತ್ತ ಮಹತ್ವದ ಹೆಜ್ಜೆಯಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
