
ಕಾರ್ಕಳ,ಜೂ.27: ಕಾರ್ಕಳ ತಾಲೂಕು ಕಲ್ಯಾ ಗ್ರಾಮದ ಹಾಳೆಕಟ್ಟೆ ಎಂಬಲ್ಲಿ ಅಕ್ರಮವಾಗಿ ಕೆಂಪುಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಅಡ್ಡಗಟ್ಟಿದ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕಾರ್ಕಳ ಗ್ರಾಮಾಂತರ ಠಾಣಾ ಪಿಎಸ್‌ಐ ಪ್ರಸನ್ನ ಎಂ.ಎಸ್ ಅವರು ಜೂ.27 ರಂದು ಮಧ್ಯಾಹ್ನ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಕಲ್ಯಾ ಗ್ರಾಮದ ಹಾಳೆಕಟ್ಟೆ ಎಂಬಲ್ಲಿ ಅಕ್ರಮವಾಗಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದಿದ್ದು, ಆರೋಪಿಗಳಾದ ಸಂಜೀವ, ಸಂತೋಷ್ ಕುಮಾರ್,ಸಂತೋಷ್ ಮತ್ತು ಹರೀಶ್ ಎಂಬವರು ಅಕ್ರಮವಾಗಿ ಬೋಳ ಪದವು ಎಂಬಲ್ಲಿAದ ಕಾರ್ಕಳ ಜೋಡುರಸ್ತೆಗೆ ಸಾಗಿಸುತ್ತಿದ್ದ 10,500 ರೂ. ಮೌಲ್ಯದ ಕೆಂಪುಕಲ್ಲು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.



.
.
.
.
.
.
.
.
.
.
.
.
.
.
.
.
.
.
.
.
