
ಕಾರ್ಕಳ, ಜು.01: ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು,ಈಗಾಗಲೇ ಅರ್ಜಿ ಸಲ್ಲಿಸಿರುವ ಕಾರ್ಕಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳಿಗೆ ವಿಕಾಸ ಸೇವಾ ಸಂಸ್ಥೆಯು ವಿಕಾಸ ಪರೀಕ್ಷಾ ಸೇತು ಎನ್ನುವ ಕಾರ್ಯಕ್ರಮದ ಮೂಲಕ ಉಚಿತ ಪರೀಕ್ಷಾ ತರಬೇತಿ ನೀಡಲಿದೆ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.
ಕಾರ್ಕಳ ವಿಕಾಸ ಸಂಸ್ಥೆ ಹಾಗೂ ಶಿವಮೊಗ್ಗದ ಅಚೀವರ್ಸ್ ಟ್ರಸ್ಟ್ ಎನ್ನುವ ತರಬೇತಿ ಸಂಸ್ಥೆಯ ಜಂಟಿ ಸಹಯೋಗದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿದ ಸ್ಪರ್ಧಾತ್ಮಕ ಪರೀಕ್ಷೆಯ ಮಾರ್ಗದರ್ಶನ ಹಾಗೂ ಉಚಿತ ಆನ್ ಲೈನ್ ತರಬೇತಿ ಶಿಬಿರವು ಜು.05 ರಿಂದ 25 ದಿನಗಳ ಕಾಲ ನಡೆಯಲಿದೆ. ಬೆಳಗ್ಗೆ ಹಾಗೂ ಸಂಜೆ ತಲಾ 2 ಗಂಟೆ ಆನ್ ಲೈನ್ ತರಬೇತಿ ಶಿಬಿರ ನಡೆಯಲಿದೆ ಎಂದು ಶಾಸಕ ಸುನಿಲ್ ಕುಮಾರ್ ಮಾಹಿತಿ ನೀಡಿದರು.
ಇದಲ್ಲದೇ ಮುಂದಿನ ಎಲ್ಲಾ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ವಿಕಾಸ ಸೇವಾ ಸಂಸ್ಥೆ ಮೂಲಕ ಉಚಿತ ತರಬೇತಿ ನೀಡಲಾಗುತ್ತದೆ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು
ಆಸಕ್ತ ಅಭ್ಯರ್ಥಿಗಳು ಉಚಿತ ತರಬೇತಿ ಗೆ ನೊಂದಣಿಗಾಗಿ ಈ ಕೆಳಗಿನ ಲಿಂಕ್ ಬಳಸಿ ನೋಂದಣಿ ಮಾಡಬಹುದು.
https://forms.gle/VWNc1BRWfkFuRJBd7
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ:+917795547123/9741494589 ಗೆ ಕರೆ ಮಾಡಬಹುದು.
ಮುಂದಿನ ಎಲ್ಲಾ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ವಿಕಾಸ ಸೇವಾ ಸಂಸ್ಥೆ ಮೂಲಕ ಉಚಿತ ತರಬೇತಿ ನೀಡಲಾಗುತ್ತದೆ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು




.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
