
ಬೆಂಗಳೂರು, ಜು. 09: ರಾಜ್ಯದಲ್ಲಿ ಅನ್ನಭಾಗ್ಯ ಫಲಾನುಭವಿಗಳಿಗೆ ಇಂದಿರಾ ಕಿಟ್ ನೀಡಲು ಟೆಂಡರ್ ಅಂತಿಮ ಹಂತಕ್ಕೆ ಬಂದಿದ್ದು,ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಕ್ಕಿ ವಿತರಣೆಯಲ್ಲಿ ಎದುರಾಗುತ್ತಿದ್ದ ಕೆಲವು ಸಮಸ್ಯೆಗಳನ್ನು ನಿವಾರಿಸುವ ದೃಷ್ಟಿಯಿಂದ ಈ ಬದಲಾವಣೆ ತರಲಾಗಿದೆ.ಸಾರ್ವಜನಿಕರ ಅಭಿಪ್ರಾಯವನ್ನು ಗಣನೆಗೆ ತೆಗೆದುಕೊಂಡು ಇಂದಿರಾ ಕಿಟ್ ವಿನ್ಯಾಸಗೊಳಿಸಲಾಗಿದೆ ಎಂದರು.
ಇಂದಿರಾ ಕಿಟ್ ಬೇಳೆ ಎಣ್ಣೆ, ಸಕ್ಕರೆ ಮತ್ತು ಉಪ್ಪನ್ನು ಒಳಗೊಂಡಿರುತ್ತದೆ. ಈ ಮೂಲಕ ಕುಟುಂಬಗಳಿಗೆ ಪೌಷ್ಟಿಕಾಂಶಯುಕ್ತ ಆಹಾರವನ್ನು ತಲುಪಿಸುವುದು ಯೋಜನೆಯ ಮುಖ್ಯಉದ್ದೇಶವಾಗಿದೆ. ಇದು ಮಕ್ಕಳು, ಗರ್ಭಿಣಿ ಸ್ತ್ರೀಯರು ಮತ್ತು ಬಾಣಂತಿಯರು ಸೇರಿದಂತೆ ಎಲ್ಲರಿಗೂ ಪ್ರಯೋಜನಕಾರಿಯಾಗಲಿದೆ. 5 ಕೆಜಿ ಅಕ್ಕಿಯ ಬದಲಿಗೆ ಈ ಕಿಟ್ ನೀಡುವುದರಿಂದ ಅದು ಸಮರ್ಪಕವಾಗಿ ಬಳಕೆಯಾಗುತ್ತದೆ ಮತ್ತು ಕುಟುಂಬಗಳ ಪೌಷ್ಟಿಕಾಂಶ ಭದ್ರತೆಗೆ ಸಹಕಾರಿಯಾಗಲಿದೆ ಎಂದರು.



.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
