
ಮಂಗಳೂರು,ಜು.11: ಚಲಿಸುತ್ತಿದ್ದ ಬಸ್ನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ, ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಖಾಸಗಿ ಬಸ್ ಕಂಡಕ್ಟರ್ ಇರ್ಫಾನ್ ಎಂಬಾತನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜುಲೈ 9 ರ ಗುರುವಾರ ಸಂಜೆ ಸುಮಾರು 5 ಗಂಟೆ ಸುಮಾರಿಗೆ ಮಂಗಳೂರು – ವಿಟ್ಲ ನಡುವೆ ಸಂಚರಿಸುವ ವೇಳೆ ಸೆಲಿನಾ ಎಂಬ ಹೆಸರಿನ ಖಾಸಗಿ ಬಸ್ ನಲ್ಲಿ ಈ ಘಟನೆ ನಡೆದಿದೆ. ಬಸ್ನಲ್ಲಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಕಂಡಕ್ಟರ್ ಇರ್ಫಾನ್, ವಿಕೃತವಾಗಿ ವರ್ತಿಸಲು ಆರಂಭಿಸಿದ್ದಾನೆ. ವಿದ್ಯಾರ್ಥಿನಿಯರ ಮುಂದೆ ತನ್ನ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪಿ, ಅತ್ಯಂತ ಅಸಭ್ಯವಾಗಿ ಸನ್ನೆ ಮಾಡಿದ್ದಾನೆ. ಅಷ್ಟೇ ಅಲ್ಲದೇ, ವಿದ್ಯಾರ್ಥಿನಿಯರನ್ನು ಬಸ್ನ ಹಿಂದಿನ ಸೀಟಿಗೆ ಬರುವಂತೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಲಾಗಿದೆ.
ಕಾಮುಕ ಕಂಡಕ್ಟರ್ ಇರ್ಫಾನ್ ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ಕಲ್ಲೇರಿ ನಿವಾಸಿಯಾಗಿದ್ದು, ಪ್ರಸ್ತುತ ಉಪ್ಪಿನಂಗಡಿಯ ಕರ್ವೇಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಈತ ಮಂಗಳೂರು ಮತ್ತು ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ.

.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
