
ಬೆಂಗಳೂರು,ಜು.11: ಭಾರತೀಯ ಚಿತ್ರರಂಗದ ಅದ್ಭುತ ಗಾಯಕಿ, ‘ಗಾನಕೋಗಿಲೆ’ ಎಂದೇ ಪ್ರಸಿದ್ಧರಾಗಿದ್ದ ಎಸ್. ಜಾನಕಿ (88) ಅವರು ಇಂದು ಸಂಜ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕನ್ನಡ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಹದಿನಾಕಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 48 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿರುವ ಜಾನಕಮ್ಮ, ದಕ್ಷಿಣ ಭಾರತದ ಸಂಗೀತ ಸಾಮ್ರಾಜ್ಞಿಯಾಗಿ ರಾರಾಜಿಸಿದ್ದರು.
ಕನ್ನಡದಲ್ಲಿ ಡಾ. ರಾಜ್‌ಕುಮಾರ್, ಪಿ. ಬಿ. ಶ್ರೀನಿವಾಸ್, ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರೊಂದಿಗೆ ಅವರು ಹಾಡಿದ ಸಾವಿರಾರು ಹಾಡುಗಳು ಇಂದಿಗೂ ಅಮರ.
ಅತ್ಯುತ್ತಮ ಗಾಯನಕ್ಕಾಗಿ 4 ಬಾರಿ ರಾಷ್ಟ್ರ ಪ್ರಶಸ್ತಿ ಹಾಗೂ ವಿವಿಧ ರಾಜ್ಯ ಸರ್ಕಾರಗಳ ನೂರಾರು ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು.
ಕನ್ನಡದ ಮೇಲಿನ ಪ್ರೀತಿ: ಆಂಧ್ರಪ್ರದೇಶದಲ್ಲಿ ಜನಿಸಿದರೂ ಕನ್ನಡ ಭಾಷೆ ಮತ್ತು ಕರ್ನಾಟಕದ ಜನರ ಮೇಲೆ ಅವರು ಅಪಾರ ಪ್ರೀತಿ ಹೊಂದಿದ್ದರು.
ಎಸ್.ಜಾನಕಿ ನಿಧನಕ್ಕೆ ಚಿತ್ರರಂಗದ ಗಣ್ಯರು, ರಾಜಕಾರಣಿಗಳು ಹಾಗೂ ಕೋಟ್ಯಂತರ ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ. ಸಂಗೀತ ಲೋಕದ ಒಂದು ಸುವರ್ಣ ಅಧ್ಯಾಯ ಇಂದು ಮುಕ್ತಾಯಗೊಂಡಂತಾಗಿದೆ.

.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
