
ಕಾರ್ಕಳ,ಜು.13: ತಾಲೂಕಿನ ಬೈಲೂರು ಮೈನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನಮ್ಮ ನಾಡಿನ ಸಾಂಪ್ರದಾಯಿಕ ಕಲೆಯಾದ ಯಕ್ಷಗಾನದ ಅರಿವು ಮೂಡಿಸುವ ಉದ್ದೇಶದಿಂದ, ಪಟ್ಲ ಫೌಂಡೇಷನ್ ಸಹಯೋಗದಲ್ಲಿ ಆಯೋಜಿಸಲಾದ “ಯಕ್ಷಧ್ರುವ ಯಕ್ಷಶಿಕ್ಷಣ” ಕಾರ್ಯಕ್ರಮವು ಜುಲೈ 15 ರಂದು ಬೆಳಿಗ್ಗೆ 10:30ಕ್ಕೆ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.
ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಪಂಚಮೇಳ ಯಕ್ಷಗಾನದ ವ್ಯವಸ್ಥಾಪಕರಾದ ಕಿಶನ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಸಚ್ಚಿದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಯಕ್ಷಗಾನ ಲೋಕದ ಧ್ರುವತಾರೆ, ಕಲಾವಿದರ ಕಾಮಧೇನು ಪಟ್ಲ ಸತೀಶ್ ಶೆಟ್ಟಿ ಅವರು ವಿಶೇಷ ಗೌರವ ಉಪಸ್ಥಿತಿಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಯಕ್ಷಧ್ರುವ ಕಾರ್ಕಳ ವಲಯ ಸಂಚಾಲಕ ಮಹಾವೀರ ಪಾಂಡಿ ಕಾಂತಾವರ, ಪಳ್ಳಿ ಘಟಕದ ಸಂಚಾಲಕ ಸುನಿಲ್ ಶೆಟ್ಟಿ, ಯಕ್ಷಗಾನ ತರಬೇತುದಾರ ಮರ್ಣೆ ಸುರೇಶ್ ಆಚಾರ್ಯ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಾಸುದೇವ ಶೆಟ್ಟಿಗಾರ್, ಶಾಲಾ ಮುಖ್ಯೋಪಾಧ್ಯಾಯಿನಿ ಆಶಾ ಭಾನು, ಎಸ್ಡಿಎಂಸಿ ಉಪಾಧ್ಯಕ್ಷೆ ಪುಷ್ಪ ಹಾಗೂ ವಿದ್ಯಾರ್ಥಿ ನಾಯಕಿ ಕುಮಾರಿ ಅಶ್ವಿತ ಭಾಗವಹಿಸಲಿದ್ದಾರೆ.
ಯಕ್ಷಗಾನ ಕಲೆಯ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಈ ವಿಶೇಷ ಪ್ರಯತ್ನದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಲಾ ಆಡಳಿತ ಮಂಡಳಿ ಹಾಗೂ ಹಳೆ ವಿದ್ಯಾರ್ಥಿ ಸಂಘ ವಿನಂತಿಸಿದೆ.




.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
