
ಕಾರ್ಕಳ, ಜು. 13: ಕಾರ್ಕಳ ತಾಲೂಕು ಕಚೇರಿ ಸಿಬ್ಬಂದಿ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಬೈಪಾಸ್ ಬಳಿ ಶಿವತಿಕೆರೆ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಕಾರ್ಕಳ ತಾಲೂಕು ಕಚೇರಿಯಲ್ಲಿ ಕಾರ್ಕಳ ಹೋಬಳಿಯ ಕಂದಾಯ ನಿರೀಕ್ಷಕರಾಗಿದ್ದ ನಂದಳಿಕೆಯ ಶಿವಪ್ರಸಾದ್ ರಾವ್ ಅವರು ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿವಪ್ರಸಾದ್ ರಾವ್ ಭಾನುವಾರ ಸಂಜೆ ಕಾರ್ಕಳ ತಾಲೂಕು ಕಚೇರಿಯಲ್ಲಿ SIR ಮೀಟಿಂಗ್ ಗೆ ಹಾಜರಾಗಿ ರಾತ್ರಿ 7.30ರ ಸುಮಾರಿಗೆ ತನ್ನ ಮನೆಯಾದ ನಂದಳಿಕೆ ಕಡೆಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಶಿವತಿಕೆರೆ ಬಳಿಯ ನಾಯರ ಪೆಟ್ರೋಲ್ ಬಂಕ್ ಬಳಿ ಇಂಡಿಕೇಟರ್ ಹಾಕಿ ಯೂಟರ್ನ್ ತೆಗೆದುಕೊಳ್ಳಲು ಮುಂದಾದಾಗ ಹಿಂದಿನಿಂದ ಅತಿವೇಗವಾಗಿ ಸ್ಕೂಟರ್ ನಲ್ಲಿ ಬಂದ ಯುವಕ ನಿಯಂತ್ರಣ ತಪ್ಪಿ ಶಿವಪ್ರಸಾದ್ ಅವರ ಬೈಕಿಗೆ ಡಿಕ್ಕಿ ಹೊಡೆದ ಈ ಭೀಕರ ಅಪಘಾತ ಸಂಭವಿಸಿದೆ.
ಈ ಅಪಘಾತದಲ್ಲಿ ಶಿವಪ್ರಸಾದ್ ರಾವ್ ಅವರ ತಲೆಗೆ ಗಂಭೀರ ಗಾಯಗಳೊಂದಿಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಣಿಪಾಲದ KMC ಆಸ್ಪತ್ರೆಗೆ ದಾಖಲಾಗಿದ್ದಾರೆ.ಸಧ್ಯ ಅವರು ಕೋಮಾಗೆ ತಲುಪಿದ್ದಾರೆ ಎನ್ನುವ ಮಾಹಿತಿ ಲಭಿಸಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
