
ಮಂಗಳೂರು, ಜು.17: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದ ಯುವತಿಯೊಬ್ಬಳ ಹತ್ಯೆ ಪ್ರಕರಣದಲ್ಲಿ ಕೊಲೆ ಆರೋಪಿ ಪಾಗಲ್ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಕ್ಕೆಪದವು ನಿವಾಸಿ ಲಾವಣ್ಯ (21) ಕೊಲೆಯಾದ ಯುವತಿ. ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಆರೋಪಿ ಈ ಹೇಯ ಕೃತ್ಯ ಎಸಗಿದ್ದು, ಮಂಗಳೂರು ಹೊರವಲಯದ ವಾಮಂಜೂರು ಪಚ್ಚನಾಡಿ ಬಳಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಗುರುವಾರ ಸಂಜೆ ಲಾವಣ್ಯ ಕೆಎಸ್ಆರ್ಟಿಸಿ ಬಸ್ನಲ್ಲಿ ಕುಳಿತಿದ್ದಾಗ ಆರೋಪಿ ಆಕೆಯ ಪಕ್ಕದಲ್ಲಿ ಬಂದು ಕುಳಿತಿದ್ದ. ಈ ಬಗ್ಗೆ ಲಾವಣ್ಯ ತನ್ನ ಸಂಬAಧಿಕರಿಗೆ ಕರೆ ಮಾಡಿ ತಿಳಿಸಿದ್ದಳು. ಬಸ್ನಿಂದ ಕೆಳಗಿಳಿಯುತ್ತಿದ್ದಂತೆ ಚೇತನ್ ತಲ್ವಾರ್ನಿಂದ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದನು. ತೀವ್ರವಾಗಿ ಗಾಯಗೊಂಡಿದ್ದ ಲಾವಣ್ಯ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೃತ್ಯ ಎಸಗಿದ ಬಳಿಕ ಆರೋಪಿ ಚೇತನ್, ಲಾವಣ್ಯ ತಂದೆಗೆ ಕರೆ ಮಾಡಿ “ನಾನು ನಿಮ್ಮ ಮಗಳನ್ನು ಕೊಂದಿದ್ದೇನೆ, ನಾನೂ ಸಹ ಜೀವನ ಕೊನೆಗೊಳಿಸಿಕೊಳ್ಳುತ್ತೇನೆ” ಎಂದು ಹೇಳಿ ಆಲ್ಟೋ ಕಾರಿನಲ್ಲಿ ಮಂಗಳೂರಿನ ಕಡೆಗೆ ಪರಾರಿಯಾಗಿದ್ದನು. ಮೊಬೈಲ್ ನೆಟ್ವರ್ಕ್ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿ, ಮಂಗಳೂರು ಹೊರವಲಯದ ವಾಮಂಜೂರು ಪಚ್ಚನಾಡಿ ಬಳಿ ಆರೋಪಿಯನ್ನು ಕಾರು ಸಮೇತ ವಶಕ್ಕೆ ಪಡೆದಿದ್ದಾರೆ.
ಸುಮಾರು ಒಂದು ತಿಂಗಳ ಹಿಂದೆಯೂ ಆರೋಪಿ ಚೇತನ್ ಯುವತಿ ಕೆಲಸ ಮಾಡುತ್ತಿದ್ದ ಆಸ್ಪತ್ರೆಗೆ ಬಂದು ಗಲಾಟೆ ಮಾಡಿದ್ದನು. ಆದರೆ ಆ ಸಮಯದಲ್ಲಿ ಯಾವುದೇ ಪೊಲೀಸ್ ದೂರು ದಾಖಲಾಗಿರಲಿಲ್ಲ.




.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
