
ಕಾರ್ಕಳ,ಜು.19: ಮುಂಗಾರು ಹಂಗಾಮಿನ ಮಳೆಯಾಶ್ರಿತ ಭತ್ತದ ಕೃಷಿಗೆ ಬೆಳೆ ವಿಮೆಗೆ ಜುಲೈ 31 ರವರೆಗೆ ಅವಕಾಶವಿದೆ. ಪ್ರಧಾನ ಪಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ನೋಂದಣಿ ಮಾಡುವಂತೆ ಸೂಚಿಸಲಾಗಿದೆ.
ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಬ್ಯಾಂಕ್ ಪಾಸ್ ಪುಸ್ತಕ, ಕಂದಾಯ ರಸೀದಿ ಮತ್ತು ಆಧಾರ್ ಪ್ರತಿ ಸಹಿತ ದಾಖಲೆಗಳನ್ನು ನೀಡಿ ವಾಣಿಜ್ಯ ಬ್ಯಾಂಕ್‌ಗಳು ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ಗ್ರಾಮಒನ್ ಮತ್ತು ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದು. ಬೆಳೆ ವಿಮೆಯಡಿ ಅಧಿಸೂಚಿತ ಬೆಳೆಗೆ ನೋಂದಾಯಿಸಿಕೊಳ್ಳಲು ಯಾವುದೇ ವಾಣಿಜ್ಯ ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಅಥವಾ ಕೃಷಿ ಸಾಲ ಮಂಜೂರಾಗಿರುವುದಿಲ್ಲವೆಂದು ದೃಢೀಕರಿಸುವುದು ಅವಶ್ಯಕವಾಗಿರುತ್ತದೆ.
ರೈತರು ಬೆಳೆ ವಿಮೆ ಯೋಜನೆಯಡಿ ನೊಂದಣಿ ಮಾಡಿಸಿಕೊಳ್ಳಲು ಜು.31 ಕೊನೆಯ ದಿನಾಂಕವಾಗಿದ್ದು,PMFBY ಯೋಜನೆ 2026-27 ಅನುಷ್ಠಾನಗೊಳಿಸುವ ವಿಮಾ ಕಂಪನಿ ಇಂಡಸ್ ಇಂಡ್ ಜನರಲ್ ಇನ್ಸೂರೆನ್ಸ್ ಕಂಪನಿಯು ವಿಮೆ ಒದಗಿಸಲಿದೆ.
ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು.ಅಥವಾ ದೂರವಾಣಿ ಸಂಖ್ಯೆ 08258 298260 ಅನ್ನು ಸಂಪರ್ಕಿಸಬಹುದು ಎಂದು ಕಾರ್ಕಳ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.



.
.
.
.
.
.
.
.
.
.
.
.
.
.
.
.
.
.
.
.
