
ನವದೆಹಲಿ,ಜು.28: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದ ದಹಲಿಯ ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದವರ ಪೈಕಿ 980ಕ್ಕೂ ಹೆಚ್ಚು ಮಂದಿಗೆ ಹಿಂದಿನ ಕ್ರಿಮಿನಲ್ ಹಿನ್ನೆಲೆ ಇರುವುದಾಗಿ ತನಿಖೆಯಲ್ಲಿ ಪತ್ತೆಯಾಗಿದೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.
ಲಭ್ಯವಿರುವ ಮಾಹಿತಿಯ ಪ್ರಕಾರ, ಈ ವ್ಯಕ್ತಿಗಳ ವಿರುದ್ಧ ಕೊಲೆ, ಕೊಲೆ ಯತ್ನ, ಅತ್ಯಾಚಾರ, ಲೂಟಿ, ಅಪಹರಣ ಹಾಗೂ ಅಕ್ರಮ ಶಸ್ತ್ರಾಸ್ತ್ರ ಸಾಗಾಟ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ ಎಂದು ತಿಳಿದುಬಂದಿದೆ.
ವೈದ್ಯಕೀಯ ಪ್ರವೇಶ ಪರೀಕ್ಷೆಯ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಂತಿಯುತವಾಗಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದರು. ಆದರೆ, ಈ ಹೋರಾಟದ ದಾರಿ ತಪ್ಪಿಸಲು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ನೀಡಲು ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಗಳು ಯೋಜಿತವಾಗಿ ಈ ಪ್ರತಿಭಟನಾ ನಿರತರ ಗುಂಪಿಗೆ ಸೇರಿಕೊಂಡಿದ್ದರು ಎಂಬುದು ಪೊಲೀಸರ ತನಿಖೆಯಿಂದ ಸ್ಪಷ್ಟವಾಗಿದೆ.
ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಮುಖ ಗುರುತಿಸುವ ತಂತ್ರಜ್ಞಾನದ (Facial Recognition) ನೆರವಿನಿಂದ ಈ ಕ್ರಿಮಿನಲ್ಗಳನ್ನು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.
ಪ್ರತಿಭಟನೆಯ ಹೆಸರಿನಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಪ್ರತಿಯೊಬ್ಬ ವ್ಯಕ್ತಿಯ ವಿರುದ್ಧವೂ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಇಲಾಖೆ ಎಚ್ಚರಿಸಿದೆ.




.
.
.
.
.
.
.
.
.
.
.
.
.
.
.
.
.
.
.
.
