
ಕಾರ್ಕಳ,ಜು.28: ಅಖಿಲ ಭಾರತ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾದ ಸಂಘಟನ್ ಸೃಜನ್ ಅಭಿಯಾನ ಕಾರ್ಯಕ್ರಮದ ಪ್ರಯುಕ್ತ ಎಐಸಿಸಿ ವೀಕ್ಷಕರಾದ ಹೇಮಂತ್ ಸಿಂಗ್ ಪಟೇಲ್ ರವರ ನೇತೃತ್ವದ ತಂಡವು ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು ಜುಲೈ 29 ಬುಧವಾರ ಬೆಳಿಗ್ಗೆ 10:30ಕ್ಕೆ ಕಾರ್ಕಳ ಜೋಡುರಸ್ತೆ ಕುಲಾಲ ಸಮಾಜ ಭವನದಲ್ಲಿ ಹಾಗೂ ಮಧ್ಯಾನ 3:00 ಗಂಟೆಗೆ ಹೆಬ್ರಿಯ ಬಂಟರ ಭವನದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಅಯ್ಕೆಗೆ ಅಭಿಪ್ರಾಯ ಸಂಗ್ರಹ ಹಾಗೂ ಪಕ್ಷ ಸಂಘಟನೆಯ ಬಗ್ಗೆ ಸಲಹೆ ಸೂಚನೆಯನ್ನು ಅವರು ನೀಡಲಿದ್ದಾರೆ.
ಎಐಸಿಸಿ ವೀಕ್ಷಕರ ಬೇಟಿಯು ಪಕ್ಷಕ್ಕೆ ಹೊಸ ಚೈತನ್ಯ ನೀಡಲಿದ್ದು ಪಕ್ಷ ಸಂಘಟನೆಗೆ ಸಹಕಾರಿಯಾಗಲಿದೆ ಹಾಗಾಗಿ ಕಾರ್ಕಳ- ಹೆಬ್ರಿ ಬ್ಲಾಕ್ ವ್ಯಾಪ್ತಿಯಲ್ಲಿರುವ ಎಲ್ಲಾ ಹಿರಿಯ ಮುಖಂಡರುಗಳು, ಪಧಾದಿಕಾರಿಗಳು,ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ತಿಳಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಶುಭದರಾವ್ ಹಾಗೂ ಗೋಪಿನಾಥ್ ಭಟ್ ಮುನಿಯಾಲು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




.
.
.
.
.
.
.
.
.
.
.
.
.
.
.
.
.
.
.
.
