
ನವದೆಹಲಿ, ಜುಲೈ 29: ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆ ಹಾಗೂ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ದೇಶದ ಪ್ರಮುಖ ಸಾಂವಿಧಾನಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಹಂಚಿಕೊಳ್ಳಲಾಗಿರುವ ಅವಹೇಳನಕಾರಿ, ದುರುದ್ದೇಶಪೂರಿತ ಮತ್ತು ಮಾನನಷ್ಟಕರ ಪೋಸ್ಟ್ಗಳನ್ನು ಪ್ರಕಟಿಸಿದ ಆರೋಪದಡಿ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.ಕೆಲವು ಪ್ರಮುಖ ಸುದ್ದಿ ಪೋರ್ಟಲ್ಗಳ ಖಾತೆಗಳು ಹಾಗೂ ನಿಂದನೀಯ ಭಾಷೆ ಬಳಸಿದ ಬಳಕೆದಾರರ ವಿವರಗಳನ್ನು ಒದಗಿಸುವಂತೆ ದೆಹಲಿ ಪೊಲೀಸರು ಸಾಮಾಜಿಕ ಜಾಲತಾಣ ‘ಎಕ್ಸ್’ಗೆ ಸೂಚನೆ ನೀಡಿದ್ದಾರೆ.
ಜುಲೈ 20 ರ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಪ್ರಧಾನಿಯವರ ವಿರುದ್ಧ ಬಳಸಲಾದ ಅಸಭ್ಯ ಕಾಮೆಂಟ್ಗಳು, ವೀಡಿಯೊಗಳು ಮತ್ತು ನಿಂದನೀಯ ಪೋಸ್ಟ್ಗಳನ್ನು ತಕ್ಷಣವೇ ಡಿಲೀಟ್ ಮಾಡುವಂತೆ ವಿವಿಧ ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ದೆಹಲಿ ಸೈಬರ್ ಕ್ರೈಮ್ ವಿಭಾಗ ನಿರ್ದೇಶನ ನೀಡಿದೆ.ಪ್ರತಿಭಟನೆಯ ಹೆಸರಿನಲ್ಲಿ ಸುಳ್ಳು ಸುದ್ದಿ, ವದಂತಿ ಹಾಗೂ ಭಾರಿ ಪ್ರಮಾಣದ ‘ಡೀಪ್ಫೇಕ್’ವೀಡಿಯೊಗಳನ್ನು ಹರಿಬಿಡುತ್ತಿದ್ದ, ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದೆ ಎನ್ನಲಾದ 400ಕ್ಕೂ ಹೆಚ್ಚು ‘ಎಕ್ಸ್’ ಖಾತೆಗಳನ್ನು ದೆಹಲಿ ಪೊಲೀಸರು ಈಗಾಗಲೇ ಗುರುತಿಸಿದ್ದಾರೆ. ಸಾಮಾಜಿಕ ಮಾಧ್ಯಮ ಮಧ್ಯವರ್ತಿ ನಿಯಮಗಳು ಹಾಗೂ ಬಿಎನ್ಎಸ್ ಅಡಿಯಲ್ಲಿ ದೆಹಲಿ ಪೊಲೀಸರ ಸೈಬರ್ ವಿಭಾಗವು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಸಮಾಜಿಕ ಶಾಂತಿ ಕೆಡಿಸುವ ಹಾಗೂ ಪ್ರಚೋದನಕಾರಿ ಪೋಸ್ಟ್ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಎದುರಾಗಲಿದೆ ಎಂದು ಎಚ್ಚರಿಸಿದೆ.




.
.
.
.
.
.
.
.
.
.
.
.
.
.
.
.
.
.
.
.
