
ಉಡುಪಿ, ಜು.29: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಉಡುಪಿ ನಗರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಯಶ್‌ಪಾಲ್ ಸುವರ್ಣ, ಬಾಬರಿ ಮಸೀದಿಯಂತೆ ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಅಲ್ಲದೆ, ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು.ಈ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯರಾತ್ರಿ ಉಡುಪಿ ನಗರ ಪೊಲೀಸ್ ಠಾಣೆಗೆ ತೆರಳಿದ ಕಾಂಗ್ರೆಸ್ ಮುಖಂಡರು ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರಿಗೆ ದೂರು ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಕೀಲರಾದ ಹಬೀಬ್ ಅಲಿ, ಹರೀಶ್ ಪಾಂಗಾಳ ಮೊದಲಾದವರು ಹಾಜರಿದ್ದರು.




.
.
.
.
.
.
.
.
.
.
.
.
.
.
.
.
.
.
.
.
