Share this news

ಮಂಗಳೂರು, ಜುಲೈ 30: ಧರ್ಮಸ್ಥಳದ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬAಧಿಸಿದ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ ನಡೆಸಿದ ಉತ್ಖನನದ ವೇಳೆ ಪತ್ತೆಯಾಗಿದ್ದ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ಗುರುತು ಡಿಎನ್‌ಎ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಮೂವರ ಕುಟುಂಬಸ್ಥರಿAದ ಸಂಗ್ರಹಿಸಿದ್ದ ಡಿಎನ್‌ಎ ಮಾದರಿಗಳನ್ನು ಅಸ್ಥಿಪಂಜರಗಳ ಡಿಎನ್‌ಎ ಜತೆ ಹೋಲಿಕೆ ಮಾಡಲಾಗಿತ್ತು. ಈ ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಡಿಎನ್‌ಎ ಕುಟುಂಬಸ್ಥರ ಮಾದರಿಗಳೊಂದಿಗೆ ಹೊಂದಾಣಿಕೆಯಾಗಿದೆ ಎಂದು ತಿಳಿದುಬಂದಿದೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಗ್ರಾಮದ ಯು.ಬಿ. ಅಯ್ಯಪ್ಪ (70), ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿಯ ಆದಿಶೇಷ (27) ಹಾಗೂ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮೀಸಗಾಣಹಳ್ಳಿ ಗ್ರಾಮದ ಕೃಷ್ಣಪ್ಪ (85) ಡಿಎನ್‌ಎ ಪರೀಕ್ಷೆಯಲ್ಲಿ ಗುರುತು ಪತ್ತೆಯಾದ ವ್ಯಕ್ತಿಗಳ ಅಸ್ಥಿಪಂಜರ ಎಂಬುದು ದೃಢಪಟ್ಟಿದೆ.
ಡಿಎನ್‌ಎ ಪರೀಕ್ಷೆಯಲ್ಲಿ ಗುರುತು ದೃಢಪಟ್ಟಿರುವ ಕೊಡಗು ಜಿಲ್ಲೆಯ ಯು.ಬಿ. ಅಯ್ಯಪ್ಪ (70) ಅವರು 2017ರ ಜೂನ್ 25ರಂದು ಮೈಸೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದರು. ಬಳಿಕ ಮನೆಗೆ ವಾಪಸ್ ಆಗಿರಲಿಲ್ಲ. ಈ ಸಂಬAಧ ಕುಟ್ಟ ವೃತ್ತದ ಶ್ರೀಮಂಗಳ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಆದಿಶೇಷ ನಾರಾಯಣ (27) ಅವರು ಬೆಂಗಳೂರಿನ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದರು. 2013ರ ಅಕ್ಟೋಬರ್ 2ರಂದು ಮನೆಗೆ ವಾಪಸ್ ಬಂದು ಮೊಬೈಲ್ ಇಟ್ಟು ಬಳಿಕ ನಾಪತ್ತೆಯಾಗಿದ್ದರು. ಈ ಹಿಂದೆ ಪದೇಪದೆ ಮನೆ ಬಿಟ್ಟು ಹೋಗುತ್ತಿದ್ದ ಕಾರಣ, ಅವರು ಮರಳಿ ಬರುತ್ತಾರೆ ಎಂದು ಕುಟುಂಬಸ್ಥರು ಆರಂಭದಲ್ಲಿ ನಾಪತ್ತೆ ಪ್ರಕರಣ ದಾಖಲಿಸಿರಲಿಲ್ಲ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮೀಸಗಾಣಹಳ್ಳಿ ಗ್ರಾಮದ ಕೃಷ್ಣಪ್ಪ (85) ಅವರು ವಯಸ್ಸಿನ ಕಾರಣದಿಂದ ಮನೆಯಲ್ಲೇ ಇರುತ್ತಿದ್ದರು. 2024ರ ಅಕ್ಟೋಬರ್ 22ರಂದು ಏಕಾಏಕಿ ಮನೆಯಿಂದ ಹೊರಹೋದ ಅವರು ಬಳಿಕ ವಾಪಸ್ ಬಂದಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಧರ್ಮಸ್ಥಳದ ಆಸುಪಾಸಿನಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಶವಗಳನ್ನು ಹೂಳಲಾಗಿದೆ ಎನ್ನುವ ಆರೋಪದ ಹಿನ್ನಲೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿತ್ತು. ಆದರೆ ಎಸ್‌ಐಟಿ ಉತ್ಖನನದ ವೇಳೆ ಪತ್ತೆಯಾದ ಅಸ್ಥಿಪಂಜರಗಳ ಪೈಕಿ ಡಿಎನ್‌ಎ ಪರೀಕ್ಷೆಯಲ್ಲಿ ಗುರುತು ದೃಢಪಟ್ಟಿರುವ ಮೂವರೂ ಪುರುಷರು ಎಂಬುದು ಇದೀಗ ತಿಳಿದುಬಂದಿದೆ. ಜುಲೈ 15ರಂದು ಎಸ್‌ಐಟಿ ಅಧಿಕಾರಿಗಳು ಸಲ್ಲಿಸಿದ್ದ ವರದಿಯಲ್ಲಿ ಅಸ್ಥಿಪಂಜರಗಳ ಗುರುತು ಪತ್ತೆ ಹಾಗೂ ಡಿಎನ್‌ಎ ಪರೀಕ್ಷೆಗೆ ಸಂಬAಧಿಸಿದ ವಿವರಗಳನ್ನು ಉಲ್ಲೇಖಿಸಲಾಗಿದೆ.

 

 

 

     

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *