
ಹೆಬ್ರಿ, ಜು31: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವರ ಆಶ್ರಯದಲ್ಲಿ ಶಿವಪುರ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕಾರ್ಕಳ ತಾಲೂಕು ಮಟ್ಟದ ಚೆಸ್ ಪಂದ್ಯಾಟದ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಇಲ್ಲಿನ 10ನೇ ತರಗತಿಯ ಅಮಯ್ ಪೂಜಾರಿ, 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 8 ನೇ ತರಗತಿಯ ಕಶ್ವಿ ಜೆ, 7ನೇ ತರಗತಿಯ ಸ್ತುತಿ ಆಚಾರ್ಯ ಮತ್ತು 6ನೇ ತರಗತಿಯ ಸುದೀಕ್ಷಾ ನಾಯಕ್ ಉಪ್ಪುಂದದಲ್ಲಿ ನಡೆಯುವ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಶಿಕ್ಷಕ ವೃಂದ ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯವರು ಅಭಿನಂದನೆ ಸಲ್ಲಿಸಿದ್ದಾರೆ.




.
.
.
.
.
.
.
.
.
.
.
.
.
.
.
.
.
.
.
.
