
ಬೆಂಗಳೂರು,ಜು.31 : ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಜಾಮೀನು ಹಾಗೂ ಶಿಕ್ಷೆಗೆ ತಡೆ ಕೋರಿ ವಿನಯ ಕುಲಕರ್ಣಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದಲ್ಲದೇ ಶಿಕ್ಷೆ ಅಮಾನತ್ತಿನಲ್ಲಿ ಇಟ್ಟು ಐದು ಲಕ್ಷ ಬಾಂಡ್ ಹಾಗೂ ಶೂರಿಟಿ ನೀಡಲು ಆದೇಶ ನೀಡಿದೆ. ವಿನಯ್ ಕುಲಕರ್ಣಿ ದೋಷಿ ಎಂದಿದ್ದ ತೀರ್ಪಿಗೂ ಕೂಡ ಇದೀಗ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹಾಗಾಗಿ ವಿನಯ್ ಕುಲಕರ್ಣಿಗೆ ಈ ಒಂದು ಪ್ರಕರಣದಿಂದ ಬಿಗ್ ರಿಲೀಫ್ ಸಿಕ್ಕಂತಾಗಿದೆ. ವಿನಯ್ ಕುಲಕರ್ಣಿ ಶಾಸಕ ಸ್ಥಾನಕ್ಕೆ ಇದೀಗ ಮತ್ತೆ ಜೀವ ಬಂದಿದೆ.ಹೈಕೋರ್ಟ್ ನಿಂದ ಜಾಮೀನು ಸಿಕ್ಕ ಬಳಿಕ ಇಂದು ಸಂಜೆ ಅಥವಾ ನಾಳೆ ವಿನಯ್ ಕುಲಕರ್ಣಿ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ.
ಕಳೆದ 2016 ರಲ್ಲಿ ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ನಡೆದಿತ್ತು. ಪ್ರಕರಣದಲ್ಲಿ ದೋಷಿಗಳಾದ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2026ರ ಏ.17ರಂದು ಮಹತ್ವದ ತೀರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಮತ್ತಿತರ ಆರೋಪಿಗಳು ಹೈಕೋರ್ಟ್ನ ಮೊರೆ ಹೋಗಿದ್ದರು.




.
.
.
.
.
.
.
.
.
.
.
.
.
.
.
.
.
.
.
.
