
ನವದೆಹಲಿ,ಆ.01: ದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮಗಳಿಗೆ ತಡೆ ಒಡ್ಡಲು, ಪರೀಕ್ಷಾ ಪಶ್ನೆಪತ್ರಿಕೆ ಸೋರಿಕೆ, ನಕಲು ಮತ್ತು ಇತರ ಅಕ್ರಮಗಳನ್ನು ಸಂಪೂರ್ಣವಾಗಿ ತಡೆಯಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ‘ಸಾರ್ವಜನಿಕ ಪರೀಕ್ಷೆಗಳು ತಿದ್ದುಪಡಿ ಕಾಯ್ದೆ, 2026’ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ. ಈ ಮೂಲಕ ನೂತನ ತಿದ್ದುಪಡಿ ವಿಧೇಯಕವು ದೇಶಾದ್ಯಂತ ಅಧಿಕೃತವಾಗಿ ಜಾರಿಗೆ ಬಂದಿದೆ. ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊAಡಿದ್ದ ಈ ವಿಧೇಯಕವನ್ನು ಅಂತಿಮ ಅನುಮೋದನೆಗಾಗಿ ರಾಷ್ಟ್ರಪತಿಗಳಿಗೆ ಕಳುಹಿಸಿಕೊಡಲಾಗಿತ್ತು. ರಾಷ್ಟ್ರಪತಿಯವರ ಅಂಕಿತ ಬೀಳುತ್ತಿದ್ದಂತೆ, ಈ ಹಿಂದೆ ಜಾರಿಯಲ್ಲಿದ್ದ ‘ಸಾರ್ವಜನಿಕ ಪರೀಕ್ಷೆಗಳ ಕಾಯ್ದೆಗೆ ಪ್ರಮುಖ ತಿದ್ದುಪಡಿಗಳನ್ನು ತರಲಾಗಿದ್ದು, ಹೊಸ ಕಾನೂನು ಜಾರಿಯಾಗಿದೆ.
ಕೇಂದ್ರ ಲೋಕಸೇವಾ ಆಯೋಗ, ಸಿಬ್ಬಂದಿ ನೇಮಕಾತಿ ಆಯೋಗ, ರೈಲ್ವೆ ನೇಮಕಾತಿ ಮಂಡಳಿ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಹಾಗೂ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳು ನಡೆಸುವ ಎಲ್ಲಾ ಪರೀಕ್ಷೆಗಳು ಈ ಕಾಯ್ದೆಯ ವ್ಯಾಪ್ತಿಗೆ ಒಳಪಡಲಿದ್ದು, ತಿದ್ದುಪಡಿ ಕಾಯ್ದೆಯಡಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗೊಂದಲ ಅಥವಾ ಅಕ್ರಮ ಎಸಗುವ ಜಾಲಗಳು, ಕೋಚಿಂಗ್ ಸೆಂಟರ್ಗಳು ಮತ್ತು ಸೇವಾ ಪೂರೈಕೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.
ಪರೀಕ್ಷೆಗಳಲ್ಲಿ ನಡೆಯುವ ತಾಂತ್ರಿಕ ಅಕ್ರಮಗಳು ಹಾಗೂ ಶಾಮೀಲಾತಿಯನ್ನು ತಡೆಯಲು ತನಿಖಾ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿದ್ದು, ಅಕ್ರಮ ಎಸಗುವ ಗುಂಪುಗಳಿಗೆ ಕಠಿಣ ಜೈಲು ಶಿಕ್ಷೆ ಮತ್ತು ಭಾರೀ ಮೊತ್ತದ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ.




.
.
.
.
.
.
.
.
.
.
.
.
.
.
.
.
.
.
.
.
