
ಕಾರ್ಕಳ, ಆ.1: ಯಕೃತ್ (ಲಿವರ್) ಸಂಬAಧಿತ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವ ಉದ್ದೇಶದಿಂದ ಕಾರ್ಕಳ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಆಗಸ್ಟ್ 3 ರಿಂದ 5, 2026 ರವರೆಗೆ ಸಮಗ್ರ ಯಕೃತ್ ಆರೋಗ್ಯ ತಪಾಸಣಾ ಪ್ಯಾಕೇಜ್ ಅನ್ನು ಪರಿಚಯಿಸಲಾಗಿದೆ. ರೂ.3,300 ಮೌಲ್ಯದ ಈ ವಿಶೇಷ ಪ್ಯಾಕೇಜ್ನ ಪ್ರಮುಖ ಆಕರ್ಷಣೆ ಅತ್ಯಾಧುನಿಕ ಫೈಬ್ರೋಸ್ಕ್ಯಾನ್ ಆಗಿದ್ದು, ಸೂಜಿ ಇಲ್ಲದೆ, ನೋವಿಲ್ಲದೆ ಕೆಲವೇ ನಿಮಿಷಗಳಲ್ಲಿ ಯಕೃತ್ನ ಗಡಸುತನ ಹಾಗೂ ಫ್ಯಾಟಿ ಲಿವರ್ ಸಮಸ್ಯೆಯನ್ನು ಪತ್ತೆಹಚ್ಚಲು ಇದು ಸಹಕಾರಿಯಾಗಿದೆ. ಪ್ಯಾಕೇಜ್ನಲ್ಲಿ ಅಲ್ಟ್ರಾಸೌಂಡ್, ರಕ್ತ ಪರೀಕ್ಷೆಗಳು, ಹೆಪಟೈಟಿಸ್ ಬಿ ಮತ್ತು ಸಿ ತಪಾಸಣೆ ಹಾಗೂ ಗ್ಯಾಸ್ಟ್ರೋಎಂಟರಾಲಜಿಸ್ಟ್ ಸಮಾಲೋಚನೆಯೂ ಒಳಗೊಂಡಿದೆ.
ಲಕ್ಷಣಗಳು ಕಾಣಿಸಿಕೊಳ್ಳುವ ಮೊದಲೇ ಫ್ಯಾಟಿ ಲಿವರ್ ಹಾಗೂ ಇತರ ಲಿವರ್ ಸಮಸ್ಯೆಗಳನ್ನು ಪತ್ತೆಹಚ್ಚಲು ಫೈಬ್ರೋಸ್ಕ್ಯಾನ್ ಅತ್ಯಂತ ಪರಿಣಾಮಕಾರಿ ಪರೀಕ್ಷೆಯಾಗಿದೆ ಎಂದು ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದ ಗ್ಯಾಸ್ಟ್ರೋಎಂಟರಾಲಜಿ ವಿಭಾಗದ ಪ್ರಾಧ್ಯಾಪಕರು ಹಾಗೂ ಉಪ ವೈದ್ಯಕೀಯ ಅಧೀಕ್ಷಕರಾದ ಡಾ. ಶಿರನ್ ಶೆಟ್ಟಿ ಹೇಳಿದ್ದಾರೆ.
ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಭವಿಷ್ಯದ ಗಂಭೀರ ಲಿವರ್ ಸಮಸ್ಯೆಗಳನ್ನು ತಡೆಯುವ ಅತ್ಯುತ್ತಮ ಮಾರ್ಗವಾಗಿದೆ ಎಂದು ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಸಂಜಯ್ ಕುಮಾರ್ ತಿಳಿಸಿದ್ದಾರೆ.
ಸೇವೆಯು ಅಪಾಯಿಂಟ್ಮೆನ್ ಆಧಾರದ ಮೇಲೆ ಲಭ್ಯವಿದ್ದು ಹೆಚ್ಚಿನ ಮಾಹಿತಿಗಾಗಿ: 97316 01150 / 08258-230583 ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.





.
.
.
.
.
.
.
.
.
.
.
.
.
.
.
.
.
.
.
.
