
ಕಾರ್ಕಳ, ಜು.04: ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಹೋಟೆಲ್ ಸನ್ಮಾನ್ ರೆಸಿಡೆಸ್ಸಿಯಲ್ಲಿ ಹಣವನ್ನು ಪಣವಿಟ್ಟು ಇಸ್ಪೀಟು ಜುಗಾರಿ ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಜುಗಾರಿ ಆಡುತ್ತಿದ್ದ ಸುಜೀತ್, ಅಭಿಮನ್ಯು, ಮಹೇಶ, ಧೀರಜ್, ನರೇಶ್ ಕುಮಾರ್, ಪ್ರಶಾಂತ ಸೇರಿ 6 ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ದಾಳಿಯ ವೇಳೆ ಯಶೋದರ (ಅಣ್ಣು), ನೂರ್ ಮಹಮ್ಮದ್, ರವಿ ಶೆಟ್ಟಿ, ಸತೀಶ್ ಎಂಬವರು ಪರಾರಿಯಾಗಿದ್ದಾರೆ.
ದಾಳಿಯ ಸಂದರ್ಭದಲ್ಲಿ 16,350 ನಗದು, ಇಸ್ಪೀಟ್ ಎಲೆಗಳು ಹಾಗೂ 17 ಸಾವಿರ ಮೌಲ್ಯದ 7 ಮೊಬೈಲ್, 10,500 ಸಾವಿರ ಮೌಲ್ಯದ ಪೀಠೋಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.
ತಲೆಮರಿಸಿಕೊಂಡಿರುವ ನಾಲ್ವರು ಆರೋಪಿಗಳು ಮತ್ತು ಹೋಟೆಲ್ ಮಾಲೀಕರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
