
ಕುಂದಾಪುರ,ಆ.08: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಪೇಟೆಯಲ್ಲಿ ಹಾಡಹಗಲೇ ಗ್ರಾ.ಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ ಕೊಲೆಗೈದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರಮುಖ ಕೊಲೆ ಆರೋಪಿ ಯುಪಿ ಮೂಲದ ರಾಜು ಎಂಬಾತನನ್ನು ಕಾಪು ಪಿಎಸ್‌ಐ ತೇಜಸ್ವಿ, ಕಾರ್ಕಳ ಗ್ರಾಮಾಂತರ ಪಿಎಸ್‌ಐ ಪ್ರಸನ್ನ ತಂಡವು ಬಂಧಿಸಿ ಕರೆತರುತ್ತಿರುವಾಗ ಬೈಂದೂರು ಸಮೀಪ ಒತ್ತಿನೆಣೆ ಬಳಿ ಆರೋಪಿ ಪೋಲಿಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಕಾಪು ಪಿಎಸ್‌ಐ ತೇಜಸ್ವಿಯವರು ತಮ್ಮ ಸರ್ವೀಸ್ ರಿವಾಲ್ವರ್ ನಿಂದ ರಾಜು ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ. ಈ ಸಂದರ್ಭದಲ್ಲಿ ಎಸ್ ಐ ತೇಜಸ್ವಿ ಅವರಿಗೆ ಗಾಯವಾಗಿದ್ದು ಉಡುಪಿ ಖಾಸಗಿ ಆಸ್ಪತ್ರೆಯ ಚಿಕಿತೆಪಡೆಯುತ್ತಿದ್ದಾರೆ.ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಪಿಎಸ್‌ಐ ತೇಜಸ್ವಿ ಅವರ ಆರೋಗ್ಯ ವಿಚಾರಿಸಿದ್ದಾರೆ.
ಮುದರಂಗಡಿಯಲ್ಲಿ ನಡೆದ ಡೇವಿಡ್ ಡಿಸೋಜ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು, ಈ ಹತ್ಯೆಗೆ ಹಣಕಾಸಿನ ವಿಚಾರವೇ ಕಾರಣ ಎನ್ನುವುದು ಮೇಲ್ನೋಟಕ್ಕೆ ಕಂಡುಬAದಿದೆ ಎಂದು ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದು, ಈ ಕುರಿತು ಹೆಚ್ಚಿನ ತನಿಖೆಯಿಂದ ಅಸಲಿ ಕಾರಣ ಏನು ಎನ್ನುವುದು ಬಹಿರಂಗವಾಗಲಿದೆ.




.
.
.
.
.
.
.
.
.
.
.
.
.
.
.
.
.
.
.
.
