
ಕಾರ್ಕಳ,ಆ.10: ಕಾರ್ಕಳ ತಾಲೂಕಿನ ಮಾಳದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಾಳ ನಿವಾಸಿ ನವೀನ(42ವ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅವರು ವಿಪರೀತ ಮದ್ಯಪಾನ ಮಾಡುತ್ತಿದ್ದು ಮನೆಯಲ್ಲಿ ಪ್ರತಿನಿತ್ಯ ಜಗಳವಾಗುತ್ತಿದ್ದ ಕಾರಣ ಅವರ ಪತ್ನಿ 2 ತಿಂಗಳ ಹಿಂದೆ ಮನೆ ಬಿಟ್ಟು ತವರು ಮನೆಗೆ ಹೋಗಿದ್ದರು. ತನಗಿರುವ ಮದ್ಯಪಾನದ ಚಟ ಅಥವಾ ಇನ್ನಾವುದೋ ಕಾರಣದಿಂದ ಮನನೊಂದು ನವೀನ ಅವರು ಆ.9 ರಂದು ಮಧ್ಯಾಹ್ನ ಮನೆಯ ಸಮೀಪದ ಹಾಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




.
.
.
.
.
.
.
.
.
.
.
.
.
.
.
.
.
.
.
.
