
ಕಾರ್ಕಳ,ಆ.11: ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜು ನಿಟ್ಟೆಯ 2026-27 ನೇ ಸಾಲಿನ ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಮತ್ತು ಪದಗ್ರಹಣ ಕಾರ್ಯಕ್ರಮವನ್ನು ಆ.6 ರಂದು ಅಜೆಕಾರ್ ಪದ್ಮ ಗೋಪಾಲ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಉದ್ಘಾಟಿಸಿದರು.
ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು, ಮಹತ್ವಾಕಾಂಕ್ಷೆಯ ಕನಸು ಕಾಣಬೇಕು ಮತ್ತು ಆ ಕನಸುಗಳನ್ನು ನನಸಾಗಿಸಲು ಶ್ರಮಿಸಬೇಕು. ನೀವು ಕನಸು ಕಾಣಲು ಸಾಧ್ಯವಾದರೆ, ಅದನ್ನು ಸಾಧಿಸಲು ಸಹ ಸಾಧ್ಯ ಎಂದು ತಿಳಿಸಿದರು. ಹಾಗೆಯೇ ನಮ್ಮ ವೈಫಲ್ಯಗಳು ಕೂಡ ಕಲಿಕೆಯ ಭಾಗವೇ ಆದರೆ ಉತ್ತಮ ಸಂವಹನ ಕೌಶಲ್ಯಗಳನ್ನು ರೂಢಿಸಿಕೊಂಡು ಯಶಸ್ಸನ್ನು ಸಾಧಿಸಬೇಕು ಎಂದರು. ವಿದ್ಯಾರ್ಥಿಗಳು ಮಾತೃದೇವೋ ಭವ, ಪಿತೃದೇವೋ ಭವದ ಜೊತೆಗೆ ರಾಷ್ಟ್ರದೇವೋ ಭವ ಎನ್ನುವ ಮಂತ್ರವನ್ನು ನೆನಪಿಟ್ಟುಕೊಂಡು ಸಮಾಜ ಸೇವೆಯಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಆಫ್ ಕ್ಯಾಂಪಸ್ ನ ಸಿಎಂ&ಡಿ ನ ನಿರ್ದೇಶಕ ಪ್ರೊ. ಯೋಗೀಶ್ ಹೆಗ್ಡೆ ಮಾತನಾಡಿ, ವಿದ್ಯಾರ್ಥಿಯಾಗಿದ್ದಾಗ ಸಿಗುವ ನಾಯಕತ್ವದ ಜವಾಬ್ದಾರಿಗಳು ಮುಂದೆ ಸಮಾಜಕ್ಕೆ ಉತ್ತಮ ನಾಯಕತ್ವವನ್ನು ನೀಡಲು, ನಾಯಕನಾಗಿ ಬೆಳೆಯಲು ಉತ್ತಮ ಅವಕಾಶವಾಗಿದೆ. ಇದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು, ಹಾಗೆಯೇ ವಿದ್ಯಾರ್ಥಿಗಳು ನಾಗರೀಕ ಪ್ರಜ್ಷೆಯನ್ನು ಗಮನದಲ್ಲಿ ಇಟ್ಟುಕೊಂಡು ಸಾಮಾಜಿಕ ರೀತಿ ನೀತಿಗಳು ಹಾಗೂ ಸಂಚಾರಿ ನಿಯಮಗಳನ್ನು ಪಾಲಿಸಬೇಕು ಜೀವ ಮತ್ತು ಜೀವನ ಎರೆಡೂ ಮುಖ್ಯ ಅನ್ನುವುದನ್ನು ಗಮನದಲ್ಲಿಟ್ಟುಕೊಂಡು ಮುನ್ನೆಡೆಯಿರಿ ಎಂದು ತಿಳಿಸಿದರು.
ವಿದ್ಯಾರ್ಥಿ ಪರಿಷತ್ ನಿರ್ದೇಶಕಿ ಮಾಲಿನಿ ಜೆ ರಾವ್ ಮತ್ತು ನಾಯಕ್ ಚಿನ್ಮಯ್ ಸದಾನಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿ ಪರಿಷತ್ ಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲೆ ಡಾ.ವೀಣಾಕುಮಾರಿ ಬಿ.ಕೆ ಕರ್ತವ್ಯ ಬೋಧೆಯನ್ನು ವಾಚಿಸಿಸಿದರು. ವಿದ್ಯಾರ್ಥಿನಾಯಕರು ತಮ್ಮ ತಮ್ಮ ಸಂಘಗಳ ಯೋಜನೆಗಳನ್ನು ವಾಚಿಸಿದರು. ವಿದ್ಯಾರ್ಥಿ ಪರಿಷತ್ ಕಾರ್ಯದರ್ಶಿ ವಿಜಯ್ ಪಾಲ್ ಚೌಹಾಣ್ 2026-27 ನೇ ಸಾಲಿನ ವಿದ್ಯಾರ್ಥಿ ಪರಿಷತ್ ಯೋಜನೆಗಳನ್ನು ವಾಚಿಸಿದರು.ಇದೇ ಸಂದರ್ಭದಲ್ಲಿ ಆಗಮಿಸಿದ ಅತಿಥಿಗಳು ಕಾಲೇಜಿನ 2025-26 ನೇ ಸಾಲಿನ ವಾರ್ಷಿಕ ಸಂಚಿಕೆ ‘ವಿಭವ’ವನ್ನು ಬಿಡುಗಡೆಗೊಳಿಸಲಾಯಿತು.
ಪ್ರಾಂಶುಪಾಲೆ ಡಾ.ವೀಣಾ ಕುಮಾರಿ ಬಿ.ಕೆ ಸ್ವಾಗತಿಸಿ, ಐಕ್ಯೂಎಸಿ ಸಂಯೋಜಕ ಪ್ರಕಾಶ್ ಬಿ ವಂದಿಸಿದರು. ಕುಮಾರಿ ಜೆನಿಷಾ ಕಾರ್ಯಕ್ರಮ ನಿರೂಪಿಸಿದರು.




.
.
.
.
.
.
.
.
.
.
.
.
.
.
.
.
.
.
.
.
