

ಬೆಂಗಳೂರು, ಆ.14: ಕರ್ನಾಟಕದಲ್ಲಿ ಗುಟ್ಕಾ ಮಾರಾಟ ನಿಷೇಧಕ್ಕೆ ಸಂಬAಧಿಸಿದ ಆದೇಶವನ್ನು ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ಗುಟ್ಕಾ ನಿಷೇಧ ಆದೇಶದ ಕುರಿತು ಬಹುತೇಕ ಶಾಸಕರಿಂದ, ಅದರಲ್ಲಿಯೂ ಕಾಂಗ್ರೆಸ್ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಕುರಿತು ಚರ್ಚಿಸಲು ಹಿರಿಯ ಶಾಸಕರು ನಿನ್ನೆ ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಆದೇಶದ ಬಗ್ಗೆ ತಮಗೆ ಮಾಹಿತಿ ಇರಲಿಲ್ಲ ಎಂದು ಈ ವೇಳೆ ಸಿಎಂ ಸ್ಪಷ್ಟಪಡಿಸಿದ್ದರು. ಬಳಿಕ ನಡೆದ ಸಂಪುಟ ಸಭೆಯಲ್ಲೂ ಈ ವಿಚಾರ ಪ್ರಸ್ತಾಪವಾಗಿದೆ. ಆರೋಗ್ಯ ಇಲಾಖೆ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡ ಸಿಎಂ ಡಿ.ಕೆ. ಶಿವಕುಮಾರ್, ತಮ್ಮ ಗಮನಕ್ಕೆ ತರದೇ ಇಂತಹ ಗಂಭೀರ ಆದೇಶವನ್ನು ಹೇಗೆ ಹೊರಡಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ. ಸುಮಾರು ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಈ ನಿರ್ಧಾರ ಪರಿಣಾಮ ಬೀರುತ್ತದೆ ಎಂದು ಸಿಎಂ ತಿಳಿಸಿದ್ದಾರೆ. ಹೀಗಾಗಿ, ಗುಟ್ಕಾ ನಿಷೇಧ ಆದೇಶವನ್ನು ಶೀಘ್ರದಲ್ಲೇ ಹಿಂಪಡೆಯುವAತೆ ಸೂಚನೆ ನೀಡಲಾಗಿದೆ. ಇಂದು ಅಥವಾ ನಾಳೆ ಈ ಆದೇಶ ಹೊರಬೀಳುವ ಸಾಧ್ಯತೆಯಿದೆ.
ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಆಹಾರ ಸುರಕ್ಷತಾ ಆಯುಕ್ತರು ಅಧಿಕೃತ ಅಧಿಸೂಚನೆ ಹೊರಡಿಸಿದ್ದರು. ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಇಲಾಖೆ ಬುಧವಾರ ಈ ಆದೇಶ ಹೊರಡಿಸಿತ್ತು. ಇನ್ನು ಅಧಿಸೂಚನೆ ಹೊರಡಿಸಿದ ದಿನಾಂಕದಿಂದಲೇ ಈ ನಿಷೇಧ ಜಾರಿಗೆ ಬಂದಿತ್ತು.




.
.
.
.
.
.
.
.
.
.
.
.
.
.
.
.
.
.
.
.
