Share this news

 

ಬೆAಗಳೂರು,ಆ.14: ರಾಜ್ಯದ ಹಲವು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ. ರಾಜ್ಯಾದ್ಯಂತ ಒಟ್ಟು 15,000 ಸರ್ಕಾರಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತಿದ್ದು, ಆಗಸ್ಟ್ 18ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ನೇಮಕಾತಿ ಪ್ರಕ್ರಿಯೆಗೆ ಸಂಬAಧಿಸಿದ ಮಾಹಿತಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊAಡಿದ್ದಾರೆ. ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಹಾಗೂ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ನಡೆಸಲು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ
ಒಳ ಮೀಸಲಾತಿ ವಿಚಾರ ಹಾಗೂ ನ್ಯಾಯಾಲಯದಲ್ಲಿದ್ದ ತಡೆಯಾಜ್ಞೆಗಳ ಹಿನ್ನೆಲೆಯಲ್ಲಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವಾಗಿತ್ತು. ಇದೀಗ ಪ್ರಮುಖ ಕಾನೂನು ಹಾಗೂ ಆಡಳಿತಾತ್ಮಕ ತೊಡಕುಗಳು ನಿವಾರಣೆಯಾಗಿದ್ದು, ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.

ಒಟ್ಟು 15,000 ಹುದ್ದೆಗಳನ್ನು ಪ್ರಾದೇಶಿಕ ಆಧಾರದ ಮೇಲೆ ಎರಡು ವೃಂದಗಳಾಗಿ ವಿಂಗಡಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 6,967 ಹುದ್ದೆಗಳನ್ನು ಮೀಸಲಿಡಲಾಗಿದೆ. ಈ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ.ಉಳಿಕೆ ಮೂಲ ವೃಂದಕ್ಕೆ ಒಟ್ಟು 8,033 ಹುದ್ದೆಗಳನ್ನು ನಿಗದಿಪಡಿಸಲಾಗಿದೆ. ಈ ಮೂಲಕ ಕಲ್ಯಾಣ ಕರ್ನಾಟಕ ಹಾಗೂ ಉಳಿಕೆ ಮೂಲ ವೃಂದ ಎರಡನ್ನೂ ಸೇರಿಸಿ ರಾಜ್ಯಾದ್ಯಂತ ಒಟ್ಟು 15,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದೆ.
ಅಭ್ಯರ್ಥಿಗಳಿಗೆ ತಮ್ಮ ಜಿಲ್ಲೆಯಲ್ಲಿ ಲಭ್ಯವಿರುವ ಹುದ್ದೆಗಳ ಕುರಿತು ಸ್ಪಷ್ಟ ಮಾಹಿತಿ ನೀಡುವ ಉದ್ದೇಶದಿಂದ ಶೈಕ್ಷಣಿಕ ಜಿಲ್ಲಾವಾರು ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಲಾಗುತ್ತದೆ. ಇದರಲ್ಲಿ ಜಿಲ್ಲಾವಾರು ಹುದ್ದೆಗಳ ಸಂಖ್ಯೆ, ಹುದ್ದೆಗಳ ವಿವರ, ಮೀಸಲಾತಿ ಹಂಚಿಕೆ ಹಾಗೂ ನೇಮಕಾತಿಗೆ ಸಂಬAಧಿಸಿದ ಬದಲಾವಣೆಗಳ ಕುರಿತು ಮಾಹಿತಿ ನೀಡಲಾಗುತ್ತದೆ.

ಶಿಕ್ಷಕರ ನೇಮಕಾತಿಗೆ ಆಗಸ್ಟ್ 18 ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದಿAದ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿಗೆ ಸಂಬAಧಿಸಿದ ಅಧಿಕೃತ ಅಧಿಸೂಚನೆಗಳನ್ನು ಸರ್ಕಾರದ ಇ-ರಾಜಪತ್ರ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಜಿಲ್ಲಾವಾರು ಹುದ್ದೆಗಳ ವಿವರ, ಮೀಸಲಾತಿ ಹಾಗೂ ನೇಮಕಾತಿ ನಿಯಮಗಳ ಕುರಿತು ತಿತಿತಿ.eಡಿಚಿರಿಥಿಚಿಠಿಚಿಣಡಿಚಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಮಾಹಿತಿ ಪಡೆಯಬಹುದು. ಅರ್ಜಿ ಸಲ್ಲಿಕೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ಗೆ ಭೇಟಿ ನೀಡಬಹುದು. ರಾಜ್ಯಾದ್ಯಂತ 15,000 ಶಿಕ್ಷಕರ ಹುದ್ದೆಗಳ ನೇಮಕಾತಿ ನಡೆಯುತ್ತಿರುವುದರಿಂದ ಸರ್ಕಾರಿ ಶಿಕ್ಷಕರ ಉದ್ಯೋಗಕ್ಕಾಗಿ ಕಾಯುತ್ತಿರುವ ಸಾವಿರಾರು ಅಭ್ಯರ್ಥಿಗಳಿಗೆ ಇದು ಮಹತ್ವದ ಅವಕಾಶವಾಗಿದೆ.

 

     

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *