

ಬೆಂಗಳೂರು,, ಆ.15: ಪಾಕಿಸ್ತಾನ ಮೂಲದ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ ಸಂಘಟನೆಯೊAದಿಗೆ ನಂಟು ಹೊಂದಿದ್ದ ಶಂಕಿತ ಉಗ್ರ ಅಸಫುಲ್ ಮಲಿಕ್ (25) ಎಂಬಾತನನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅಸಫುಲ್ ಮಲಿಕ್, ಬೆಂಗಳೂರಿನ ಹೊರವಲಯದ ಜಿಗಣಿಯಲ್ಲಿ ನೆಲೆಸಿದ್ದ.ಬೊಮ್ಮಸಂದ್ರದ ಕೈಗಾರಿಕಾ ಪ್ರದೇಶದ ಖಾಸಗಿ ಸಂಸ್ಥೆಯೊAದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ ಉಗ್ರ ಸಂಘಟನೆಯೊAದಿಗೆ ಸಂಪರ್ಕ ಹೊಂದಿದ್ದ ಅಸಫುಲ್ ಮಲಿಕ್, ಪಾಕಿಸ್ತಾನ ಸೇನೆಯ ಮೇಲೆ ದಾಳಿ ನಡೆಸಲು ತರಬೇತಿ ಪಡೆಯಲು ಯೋಜನೆ ರೂಪಿಸುತ್ತಿದ್ದ ಎಂಬ ಖಚಿತ ಮಾಹಿತಿ ಹೆಬ್ಬಗೋಡಿ ಪೊಲೀಸರಿಗೆ ಲಭ್ಯವಾಗಿತ್ತು. ಆ ಮಾಹಿತಿಯ ಅನ್ವಯ ಇನ್ಸ್ಪೆಕ್ಟರ್ ಸೋಮಶೇಖರ್ ಜಿ. ನೇತೃತ್ವದ ತಂಡ ಆ.11ರಂದು ಅಸಫುಲ್ ಮಲಿಕ್ನನ್ನು ವಶಕ್ಕೆ ಪಡೆದು ತನಿಖೆ ನಡೆಸಿತ್ತು.
ಫೇಸ್ಬುಕ್ ಮೂಲಕ ಅಫ್ಘಾನಿಸ್ತಾನದ ಇಮ್ರಾನ್ ಹೈದರ್ ಎಂಬ ಉಗ್ರನೊಂದಿಗೆ ಸಂಪರ್ಕ ಸಾಧಿಸಿದ್ದ ಈತ ಪಾಕ್ ಸೇನೆ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಆತನಿಂದ ಸಹಾಯ ಕೋರಿದ್ದ. ಪಾಕಿಸ್ತಾನದ ಸೇನೆ ಅಲ್ಲಿನ ಮಸೀದಿಗಳು ಮದರಸಾಗಳಲ್ಲಿ ಮುಸ್ಲಿಮರ ಮೇಲೆ ನಡೆಸುತ್ತಿರುವ ದೌರ್ಜನ್ಯ, ಹಾಗೂ ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ನಡುವಿನ ಸಂಘರ್ಷದಲ್ಲಿ ಪಾಕ್ ಸೇನೆಯು ಪ್ಯಾಲೆಸ್ಟೈನ್ ಮುಸ್ಲಿಂರಿಗೆ ಸಹಾಯ ಮಾಡದೆ ಇಸ್ರೇಲ್ಗೆ ಬೆಂಬಲ ನೀಡುತ್ತಿದೆ ಎಂದು ಸೇಡು ತೀರಿಸಿಕೊಳ್ಳಲು ನಿರ್ಧರಿಸಿದ್ದ. ಅಫ್ಘಾನಿಸ್ತಾನಕ್ಕೆ ಪ್ರಯಾಣಿಸಲು ಪಾಸ್ಪೋರ್ಟ್ ಪಡೆದು ವೀಸಾಕ್ಕೂ ಅರ್ಜಿ ಸಲ್ಲಿಸಿದ್ದ. ಆದರೆ ಆರ್ಥಿಕ ಸಂಕಷ್ಟ ಮತ್ತು ಕುಟುಂಬದ ಜವಾಬ್ದಾರಿಗಳಿಂದಾಗಿ ಆತನಿಗೆ ಪ್ರಯಾಣಿಸಲು ಸಾಧ್ಯವಾಗಿರಲಿಲ್ಲ ಎಂದು ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ನಾರಾಯಣ್ ಎಂ. ತಿಳಿಸಿದ್ದಾರೆ.
ಆರೋಪಿಯ ಮೊಬೈಲ್ ಫೋನ್ನ್ನು ಸದ್ಯ ವಶಕ್ಕೆ ಪಡೆಯಲಾಗಿದ್ದು ಅದರಲ್ಲಿ ಪಾಕ್ ಸೇನೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಕುರಿತು ನಡೆಸಿರುವ ಸಂಭಾಷಣೆಯ ಆಡಿಯೋ ರೆಕಾರ್ಡಿಂಗ್ಸ್, ಸಂದೇಶಗಳು ಪತ್ತೆಯಾಗಿವೆ. ಸದ್ಯ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 113(3) ಅಡಿಯಲ್ಲಿ ಭಯೋತ್ಪಾದನಾ ಕೃತ್ಯಕ್ಕೆ ಸಂಬAಧಿಸಿದAತೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.







.
.
.
.
.
.
.
.
.
.
.
.
.
.
.
.
.
.
.
.
