

ಕಾರ್ಕಳ,ಆ.16: ಉತ್ತರಾಖಂಡದ ಹಲ್ದ್ವಾನಿ ರಾಮಲೀಲಾ ಮೈದಾನದಲ್ಲಿ ಆಗಸ್ಟ್ 8 ರಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳವನ್ನು ಶುದ್ಧೀಕರಣ ಮಾಡುವ ಮೂಲಕ ಸ್ವಚ್ಛಗೊಳಿಸಲಾಗಿದೆ ಎಂಬ ವಿಚಾರ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಗಿದೆ.
ರಾಷ್ಟ್ರಮಟ್ಟದ ದಲಿತ ಸಮುದಾಯದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳವನ್ನು ಅಪವಿತ್ರ ಎಂದು ಭಾವಿಸಿ ಶುದ್ಧೀಕರಣ ಮಾಡಿರುವುದು ಖಂಡನೀಯ. ದೇಶದಲ್ಲಿ ಇಂದಿಗೂ ಅಸ್ಪ್ರಶ್ಯತೆ ಜೀವಂತವಾಗಿದೆ ಎನ್ನುವುದಕ್ಕೆ ಈ ಘಟನೆ ಉತ್ತಮ ಉದಾಹರಣೆ. ಇಂತಹ ಪ್ರಕರಣ ಭಾರತೀಯ ಸಂವಿಧಾನದ ವಿಧಿ 17 ರ ಪ್ರಕಾರ ಅಸ್ಪ್ರಶ್ಯತೆಯು ಶಿಕ್ಷಾರ್ಹ ಅಪರಾಧವಾಗಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ದಲಿತ ಮುಖಂಡ ಸುಧಾಕರ್ ದಾನಶಾಲೆ ಆಗ್ರಹಿಸಿದ್ದಾರೆ








.
.
.
.
.
.
.
.
.
.
.
.
.
.
.
.
.
.
.
.
