

ಕಾರ್ಕಳ,ಆ.16: ಅಜೆಕಾರು ಜ್ಞಾನಸುಧಾ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು, ಪದ್ಮನಗರದಲ್ಲಿ ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿ ಅವರ “ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು” ಎಂಬ ದೇಶಭಕ್ತಿಯ ಚಿಂತನೆಯೊAದಿಗೆ ರೂಪುಗೊಂಡಿರುವ ‘ದೇಶಸುಧಾ’ ಕಾರ್ಯಕ್ರಮದ ಮೂರನೇ ಮಾಲಿಕೆ ಸ್ವಾತಂತ್ರ‍್ಯೋತ್ಸವದAದು ಅಜೆಕಾರು ಪದ್ಮಗೋಪಾಲ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆದರ್ಶ ಗೋಖಲೆ ಅವರು “ಚೈತನ್ಯದ ಚಿಲುಮೆ ಬಂಕಿಮ ಚಂದ್ರ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಬಂಕಿಮ ಚಂದ್ರ ಚಟ್ಟೋಪಾಧ್ಯಾಯರ ಜೀವನ, ಸಾಹಿತ್ಯಿಕ ಕೊಡುಗೆ ಹಾಗೂ ದೇಶಭಕ್ತಿಯ ಚಿಂತನೆಗಳನ್ನು ಪರಿಚಯಿಸುತ್ತಾ, ‘ವಂದೇ ಮಾತರಂ’ ಗೀತೆಯ ಹಿನ್ನೆಲೆ, ಅರ್ಥ ಮತ್ತು ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿಯಲ್ಲಿ ವಿವರಿಸಿದರು. ‘ವಂದೇ ಮಾತರಂ’ ಗೀತೆಯಲ್ಲಿರುವ ರಾಷ್ಟ್ರಪ್ರೇಮದ ಭಾವನೆ ಹಾಗೂ ದೇಶದ ಮೇಲಿನ ಗೌರವವನ್ನು ಅವರು ವಿದ್ಯಾರ್ಥಿಗಳಿಗೆ ವಿವರಿಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ‘ವಂದೇ ಮಾತರಂ’ ಗೀತೆಯನ್ನು ಸಾಮೂಹಿಕವಾಗಿ ಪಠಿಸಲಾಯಿತು.
ಕಾರ್ಯಕ್ರಮದಲ್ಲಿ ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿ, ಟ್ರಸ್ಟಿಗಳಾದ ಅನಿಲ್ ಕುಮಾರ್ ಜೈನ್, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ ಮಿಥುನ್ ಯು., ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಸಂತೋಷ್, ಉಪಪ್ರಾಂಶುಪಾಲರಾದ ಆರತಿ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ರಾಮಚಂದ್ರ ನೆಲ್ಲಿಕಾರ್ ಉಪಸ್ಥಿತರಿದ್ದರು.
ಶಿಕ್ಷಕ-ಶಿಕ್ಷಕಿಯರು, ವಿದ್ಯಾರ್ಥಿಗಳು ಹಾಗೂ ದೇಶಭಕ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಶಮಿತಾ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.








.
.
.
.
.
.
.
.
.
.
.
.
.
.
.
.
.
.
.
.
